ಕರ್ನಾಟಕ

ಕಾವೇರಿ ವಿವಾದ; ಪ್ರಧಾನಿ ಮೋದಿ ಮಧ್ಯಸ್ಥಿಕೆ ಅಗತ್ಯವಿಲ್ಲ: ಶೆಟ್ಟರ್

Pinterest LinkedIn Tumblr

shettarಬೆಂಗಳೂರು: ಕಾವೇರಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕಾಗಿಲ್ಲ. ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕೆಂದು ಜನರ ದಾರಿ ತಪ್ಪಿಸಲು ಈ ಹೇಳಿಕೆ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯದ ಪರ ಹಿರಿಯ ವಕೀಲರಾದ ಫಾಲಿ ನಾರಿಮನ್ ಅವರಿಂದ ದೊಡ್ಡ ಬ್ಲಂಡರ್ ಆಗಿದೆ. ಒಟ್ಟಾರೆ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕದ ಲೀಗಲ್ ಟೀಮ್ ಸಂಪೂರ್ಣವಾಗಿ ಎಡವಿದೆ ಎಂದು ಆರೋಪಿಸಿದರು.

ಕಾವೇರಿ ವಿಚಾರದಲ್ಲಿ ಸಂಭವಿಸಿದ ಗಲಾಟೆಯಿಂದ ರಾಜ್ಯಕ್ಕೆ 25 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಗಲಾಟೆ ವಿಚಾರದಲ್ಲಿ ಮಾಹಿತಿ ಸಂಗ್ರಹಿಸುವಲ್ಲಿಯೂ ಗುಪ್ತದಳ ವಿಫಲವಾಗಿದೆ ಎಂದು ದೂರಿದರು.

ಕಾವೇರಿ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ, ಪ್ರಧಾನಿ ಮಧ್ಯಸ್ಥಿಕೆಗೂ ಒತ್ತಾಯಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಬಿಜೆಪಿ ಮುಖಂಡರು ಪ್ರತಿಕ್ರಿಯೆ ವ್ಯಕ್ತಪಡಿಸತೊಡಗಿದ್ದಾರೆ.

-ಉದಯವಾಣಿ

Comments are closed.