ಕರ್ನಾಟಕ

ಸಂಸತ್ ಗೃಹ ಸಮಿತಿ ಸಿಎಂ ಭೇಟಿ

Pinterest LinkedIn Tumblr

cm

ಬೆಂಗಳೂರು, ಸೆ. ೧೬- ಬೆಂಗಳೂರಿನಲ್ಲಿ ನಡೆಯಲಿರುವ ಬಂಗಾಳಿ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಸಂಸತ್ತಿನ ಗೃಹ ಸಮಿತಿಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪ್ರದೀಪ್ ಭಟ್ಟಾಚಾರ್ಯ ನೇತೃತ್ವದ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ಈ ನಿಯೋಗದ ಸದಸ್ಯರು ಬೆಂಗಳೂರಿನಲ್ಲಿ ನಡೆಯುವ ಬಂಗಾಳಿ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು.
ಬೆಂಗಳೂರಿನಲ್ಲಿ ನಡೆಯುವ ಬಂಗಾಳಿ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ ಅಗತ್ಯ ನೆರವು, ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಗಕ್ಕೆ ಭರವಸೆ ನೀಡಿದರು.
ಡಾ. ದೇವಿಶೆಟ್ಟಿ ಭೇಟಿ
ನಾರಾಯಣ ಹೃದಯಾಲಯದ ಸಂಸ್ಥಾಪಕ ಅಧ್ಯಕ್ಷ ಡಾ. ದೇವಿಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

Comments are closed.