
ಬೆಂಗಳೂರು: ಡಿವೈಎಸ್ಪಿ ಗಣಪತಿ ಅವರ ಅಸಹಜ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಗಣಪತಿ ಅವರ ತಂದೆ ಕೆ.ಕುಶಾಲಪ್ಪ ಮತ್ತು ಸಹೋದರ ಕೆ.ಮಾಚಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಅಬ್ದುಲ್ ನಾಜಿರ್ ವಜಾಗೊಳಿಸಿದ್ದಾರೆ.
ಈ ಪ್ರಕರಣವನ್ನು ಸಿಬಿಐಗೆ ಉಲ್ಲೇಖಿಸುವ ಅಗತ್ಯವಿಲ್ಲ. ಸಿಐಡಿ ಪೊಲೀಸರು ಮಡಿಕೇರಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಲಿಸಿರುವ ಬಿ ರಿಪೋರ್ಟ್ ನ್ನು ವಿರೋಧಿಸಬಹುದು ಮತ್ತು ವಿಷಯವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಬಹುದು ನ್ಯಾಯಾಧೀಶರು ಹೇಳಿದ್ದಾರೆ.
ಸಿಐಡಿ ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಬಿ ವರದಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಸಂದರ್ಭದಲ್ಲಿ, ದೂರುದಾರ ಪರ ವಕೀಲ, ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ಎಂ.ಪ್ರಸಾದ್, ಪ್ರಣಬ್ ಮೊಹಾಂತಿಯವರು ಡಿವೈಎಸ್ಪಿ ಗಣಪತಿಯವರ ಆತ್ಮಹತ್ಯೆಗೆ ಕಾರಣವಾಗಿದ್ದು, ಅವರು ಸರ್ಕಾರದಲ್ಲಿ ಉನ್ನತ ಹುದ್ದೆ ಹೊಂದಿದ್ದಾರೆ. ಪ್ರಕರಣದ ನಿಸ್ಪಕ್ಷಪಾತ ತನಿಖೆ ನಡೆಸಬೇಕೆಂದು ವಾದಿಸಿದ್ದರು.
ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ಕಾರಣಗಳು ಏನೇ ಇದ್ದರೂ ಮಡಿಕೇರಿಯಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಎತ್ತಬೇಕಾಗಿತ್ತು. ತನಿಖೆ ನಡೆಸಿದ ನಂತರವೇ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ವರದಿ ಸಲ್ಲಿಸಿದ್ದಾರೆ ಎಂದರು.
ಮಂಗಳೂರಿನಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಂ.ಕೆ.ಗಣಪತಿ ಮಡಿಕೇರಿಯ ಲಾಡ್ಜ್ ಒಂದರಲ್ಲಿ ಜುಲೈ 7ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದರು.
Comments are closed.