ಕರ್ನಾಟಕ

ರಾಜ್ಯ ಸರಕಾರ ಉರುಳಿಸಲು ಕೇಂದ್ರ ಮಸಲತ್ತು: ವೀರಪ್ಪ ಮೊಯ್ಲಿ ಆರೋಪ

Pinterest LinkedIn Tumblr

Veerappa_Moily_bite

ಬೆಂಗಳೂರು: ಕಾಂಗ್ರೆಸ್ ಸರಕಾರವನ್ನು ಉರುಳಿಸಲು ಕೇಂದ್ರ ಸರಕಾರ ಸಂಚು ರೂಪಿಸಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಗಂಭೀರವಾಗಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕಾವೇರಿ ವಿಷಯದಲ್ಲಿ ಸುಪ್ರೀಂ ಕೋರ್ಟ್ ನೈಜ ಕಾನೂನು ಧಿಕ್ಕರಿಸಿ ತೀರ್ಪು ಪ್ರಕಟಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ. ಇಂತಹ ಸಂದರ್ಭದಲ್ಲಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಿ ಎಂದು ಹೇಳಲು ಕೋರ್ಟ್ ಬಳಿ ಏನು ಆಧಾರವಿದೆ ಎಂದು ಪ್ರಶ್ನಿಸಿದರು.

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಸೆಪ್ಟೆಂಬರ್ 28ರವರೆಗೂ ಪ್ರತಿ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿತ್ತು.

Comments are closed.