ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ದುರಾದೃಷ್ಟಕರ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಬೇಸರ ವ್ಯಕ್ತಪಡಿಸಿದರು.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳ ಮಧ್ಯ ಆಕ್ರೋಶ ಭುಗಿಲೆದ್ದಿದೆ. ಆದರೆ, ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ವಿದೇಶಗಳ ಸಮಸ್ಯ ಕುರಿತು ಮಾತನಾಡುತ್ತಾರೆ. ಆದರೆ, ನಮ್ಮ ರಾಜ್ಯದ ಸಮಸ್ಯೆಗಳು ಅವರಿಗೆ ಅರ್ಥವಾಗುವುದಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಸೇರಿದಂತೆ ಯಾವುದೇ ನಿರ್ಧಾರ ಕೈಗೊಂಡರು ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಸ್ಪಷ್ಟಪಡಿಸಿದರು.
Comments are closed.