ಕರ್ನಾಟಕ

ಕಾವೇರಿ ವಿವಾದ; ಮೋದಿಮೋಸ ಟ್ವೀಟರ್ ನಲ್ಲಿ ಟ್ರೆಂಡಿಂಗ್: ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಟೀಕೆ

Pinterest LinkedIn Tumblr

mo

ಬೆಂಗಳೂರು: ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬುಧವಾರ ಕರೆದಿದ್ದ ಸರ್ವಪಕ್ಷ ಸಭೆಗೆ ಬಿಜೆಪಿ ಬಹಿಷ್ಕಾರ ಹಾಕಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಸಂಸದರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಿಗ್ಗಾಮುಗ್ಗಾ ಟೀಕಾಪ್ರಹಾರ ನಡೆಸುವ ಮೂಲಕ ಬಿಜೆಪಿ ಮುಖಂಡರ ದ್ವಂದ್ವ ನಿಲುವನ್ನು ಖಂಡಿಸುತ್ತಿದ್ದಾರೆ.

ಕಾವೇರಿ ವಿಚಾರದಲ್ಲಿ ಬಿಜೆಪಿ ಡಬಲ್ ಗೇಮ್ ಆಡುತ್ತಿದೆ ಎಂದು ಟ್ವೀಟರ್ ಮತ್ತು ಫೇಸ್ ಬುಕ್ ಗಳಲ್ಲಿ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. #ಮೋದಿಮೋಸ ಎಂಬ ಹ್ಯಾಶ್ ಟ್ಯಾಗ್ ಮೂಲಕ ಮೋದಿ ವಿರುದ್ಧ ಟೀಕೆ ವ್ಯಕ್ತವಾಗುತ್ತಿದೆ.

ಸರ್ವಪಕ್ಷ ಸಭೆಗೆ ಬಿಜೆಪಿ ಗೈರು ಹಾಜರು, ಕಾವೇರಿ ವಿಚಾರದಲ್ಲಿ ಮೋದಿ ಮೌನ, ತಮಿಳುನಾಡಿನಲ್ಲಿ ಬಿಜೆಪಿ ನಾಯಕರ ಹೇಳಿಕೆಯನ್ನು ಟ್ವೀಟರಿಗರು ಟೀಕಿಸಿದ್ದಾರೆ.

Comments are closed.