ಶಿವಮೊಗ್ಗ: ಪಕ್ಷದ ಜವಾಬ್ದಾರಿ ಹೊತ್ತ ಬಿಜೆಪಿ ನಾಯಕರು ಯಾವುದೇ ಕಾರಣಕ್ಕೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಾರ್ಯಕ್ರಮಕ್ಕೆ ಹೋಗಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪಕ್ಷದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು, ತೀರ್ಮಾನಗಳ ಕುರಿತಂತೆ ಜವಾಬ್ದಾರಿ ಹೊತ್ತ ಬಿಜೆಪಿ ನಾಯಕರು ಯಾವುದೇ ಕಾರಣಕ್ಕೂ ಕಾರ್ಯಕ್ರಮಕ್ಕೆ ಹೋಗಬಾರದು. ನಾನು ಕೂಡ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಪಕ್ಷದಲ್ಲಿ ಗೊಂದಲಗಳು ಸೃಷ್ಟಿಯಾಗಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಕೇವಲ ಒಬ್ಬರ ಅಭಿಪ್ರಾಯದಿಂದ ತೀರ್ಮಾನಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ಒಮ್ಮತ ಅಭಿಪ್ರಾಯಗಳು ಮುಖ್ಯಪಾತ್ರ ನಿರ್ವಹಿಸುತ್ತವೆ ಎಂದು ಹೇಳಿದ್ದಾರೆ.
ಪಕ್ಷದಲ್ಲಿ ಪದಾಧಿಕಾರಿಗಳು ನೇಮಕ ಕುರಿತಂತೆ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಪಕ್ಷದಲ್ಲಿ ಚರ್ಚೆ ನಡೆಸಲಾಗಿದೆ.
ಶಿವಮೊಗ್ಗ ಜಿಲ್ಲೆಯನ್ನು ಸ್ಮಾರ್ಟ್ ಸಿಟಿಗಳ ಸಾಲಿಗೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರ ಬಳಿ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದುಳಿದ ಮತ್ತು ದಲಿತ ವರ್ಗಗಳ ಸಂಘನೆಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಎಂಬ ಸಂಘಟನೆಯೊಂದನ್ನು ಹುಟ್ಟುಹಾಕಲಾಗಿದ್ದು. ಇದಕ್ಕೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ನಡುವೆ ಬಟಾಪಟಿ ನಡೆದಿತ್ತು. ಇದರಂತೆ ಕೋರ್ಟ್ ಕಮಿಟಿ ಸಭೆಯಲ್ಲಿಯೂ ಇಬ್ಬರ ನಡುವೆ ವಾಕ್ಸಮರಗಳು ನಡೆದಿತ್ತು.
ಈ ಸಂಬಂಧ ರಾಜ್ಯ ಕಾರ್ಯಕಾರಿಣಿ ಸಭೆಯೊಂದರಲ್ಲಿ ತೀರ್ಮಾನವೊಂದನ್ನು ಕೈಗೊಳ್ಳಲಾಗಿತ್ತು. ಪಕ್ಷದ ನಾಯಕರು ಸಭೆ, ರ್ಯಾಲಿ, ಸಮಾವೇಶಗಳನ್ನು ಪಕ್ಷದ ಚೌಕಟ್ಟಿನಲ್ಲಿಯೇ ನಡೆಸಬೇಕೆಂದು ತೀರ್ಮಾನವನ್ನು ತೆಗೆದುಕೊಳ್ಳಲಾಗಿತ್ತು. ಆದರೆ, ಇದಾವುದಕ್ಕೂ ಜಗ್ಗದ ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ನಡೆಸಲು ತೀರ್ಮಾನಿಸಿದ್ದರು.
ಕರ್ನಾಟಕ
Comments are closed.