ಬೆಂಗಳೂರು,ಸೆ.23-ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತ ಅವರು ಜ್ವರ ಮತ್ತು ಡಿ-ಹೈಡ್ರೇಶನ್ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿ ಅವರ ಆರೋಗ್ಯ ಸುಧಾರಿಸಲಿ ಎಂದು ಹಾರೈಸಿದ್ದಾರೆ.
Comments are closed.