
ಚೆನ್ನೈ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಿಂಗಪುರಕ್ಕೆ ಕರೆದೊಯ್ಯಲಾಗುವುದು ಎಂಬ ವರದಿಗಳನ್ನು ಎಐಎಡಿಎಂಕೆ ನಿರಾಕರಿಸಿದೆ.
ಸಾಮಾಜಿಕ ಜಾಲತಾಣಗಳು ಸೇರಿದಂತೆ ಮಾಧ್ಯಮಗಳಲ್ಲಿ ಈ ಸುದ್ದಿ ವರದಿಯಾಗುತ್ತಿದ್ದಂತೆ, ‘ಜಯಲಲಿತಾ ಅವರನ್ನು ಚಿಕಿತ್ಸೆಗಾಗಿ ಸಿಂಗಪುರಕ್ಕೆ ಕರೆದೊಯ್ಯಲಾಗಿದೆ ಎಂಬುದು ಸುಳ್ಳು. ಅವರು ಎಲ್ಲಿಗೂ ಹೋಗುತ್ತಿಲ್ಲ. ಯಾರೋ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅವರು ಶೀಘ್ರವೇ ಮನೆಗೆ ಮರಳಲಿದ್ದಾರೆ’ ಎಂದು ಪಕ್ಷದ ವಕ್ತಾರೆ ಸಿ. ಸರಸ್ವತಿ ಸ್ಪಷ್ಟಪಡಿಸಿದ್ದಾರೆ.
‘ವೈದ್ಯರು ಜಯಲಲಿತಾ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ’ ಎಂದು ಅಪೊಲೊ ಆಸ್ಪತ್ರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ಬಯ್ಯ ವಿಶ್ವನಾಥನ್ ತಿಳಿಸಿದ್ದಾರೆ.
Comments are closed.