ಕರ್ನಾಟಕ

ಈಶ್ವರಪ್ಪ ನೇತೃತ್ವದ ಸಂಗೊಳ್ಳಿ ರಾಯಣ್ಣ ಸಮಾವೇಶಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ

Pinterest LinkedIn Tumblr

eshwarappa

ಬೆಂಗಳೂರು, ಸೆ. 30 – ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶಕ್ಕೂ ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟಾಂಗ್ ನೀಡಿದ್ದಾರೆ.

ಬಿಜೆಪಿ ಅಕ್ಟೋಬರ್ ತಿಂಗಳಲ್ಲಿ ದೀನ ದಲಿತರ ಮತ್ತು ಹಿಂದುಳಿದವರ ಅಭಿವೃದ್ಧಿಯ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಆದರೆ ಈಶ್ವರಪ್ಪನವರು ಹಾವೇರಿಯಲ್ಲಿ ನಡೆಸುವ ಕಾರ್ಯಕ್ರಮಕ್ಕೂ ಬಿಜೆಪಿ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ. ಒಂದು ವೇಳೆ ಸಂಬಂಧವಿದ್ದರೆ ಈಶ್ವರಪ್ಪ ಅವರಲ್ಲೇ ಕೇಳಿ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು

ಅಕ್ಟೋಬರ್ 3 ಮತ್ತು 4ರಂದು ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಏರ್ಪಡಿಸಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ, ರಮೇಶ್ ಜಿಗಜಿಣಗಿ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ್ ಸೇರಿ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿದು ತಿಳಿಸಿದರು.

ಸಭೆಯಲ್ಲಿ ಸಂಸದರು, ಶಾಸಕರು ಸೇರಿ ಒಟ್ಟು 600ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಬೆಳೆ ಪರಿಹಾರಕ್ಕೆ ಆಗ್ರಹ

ಬಿಜಾಪುರ ಮತ್ತು ಗುಲ್ಬರ್ಗದಲ್ಲಿ ಅತಿವೃಷ್ಟಿಯಿಂದ 4 ಲಕ್ಷಕ್ಕೂ ಹೆಚ್ಚು ಎಕರೆ ಬೆಳೆ ನಷ್ಟವಾಗಿದೆ. ಅಲ್ಲಿ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. 2000ಕ್ಕೂ ಧಿಕ ಮನೆಗೆ ಹಾನಿಯಾಗಿದೆ. 10ಕ್ಕೂ ಅಧಿಕ ಕೆರೆಗಳು ಒಡೆದು ಹೋಗಿವೆ. ಆದ್ದರಿಂದ ಸರ್ಕಾರ ಪ್ರತಿ ಎಕರೆಗೆ 25ರಿಂದ 30 ಸಾವಿರ ರೂ. ಪರಿಹಾರ ನೀಡಬೇಕು. ಅಲ್ಲಿನ ರೈತರ ಸಾಲ ಮನ್ನಾ ಮಾಡಬೇಕು. ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಬೇಕು ಎಂದು ಜಗದೀಶ್ ಶೆಟ್ಟರ್ ಒತ್ತಾಯಿಸಿದರು.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆ ಸ್ವಾಗತಿಸಿದ ಅವರು, ಸೇನೆಯ ಯೋಧರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು.

ಶಾಸಕ ಡಾ.ಅಶ್ವಥ್ ನಾರಾಯಣ್ ಮತ್ತಿತರರು ಹಾಜರಿದ್ದರು.

Comments are closed.