
ಚಿಕ್ಕಮಗಳೂರು: 6ನೇ ತರಗತಿಯಲ್ಲಿ ಓದುತ್ತಿದ್ದ 12 ವರ್ಷದ ಬಾಲಕಿ 5 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
ತಾಲೂಕಿನ ಸಾರಗೋಡು ಗ್ರಾಮದ ಈ ಬಾಲಕಿ ಅದೇ ಗ್ರಾಮದ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಉತ್ತರ ಕರ್ನಾಟಕದಿಂದ 20 ವರ್ಷದ ಹಿಂದೆಯೇ ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ಆಗಮಿಸಿರುವ ದಂಪತಿಯ ಮಗಳು ಈ ಬಾಲಕಿ. ಈ ಸ್ಥಿತಿಗೆ ಆಕೆ ಇಬ್ಬರು ಯುವಕರ ಹೆಸರು ಹೇಳಿದ್ದಾಳೆ ಎನ್ನಲಾಗಿದೆ.
ಸ್ಥಳಕ್ಕೆ ಆಲ್ದೂರು ಠಾಣೆ ಪಿಎಸೈ ಮತ್ತು ಸಿಬ್ಬಂದಿ ಭೇಟಿ ನೀಡಿ ದೂರು ದಾಖಲಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಮಕ್ಕಳ ರಕ್ಷಣಾ ಸಮಿತಿ ಸದಸ್ಯರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.
Comments are closed.