ಕಲಬುರಗಿ: ಎಲ್.ಕೆ.ಜಿ.ಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಮಗುವಿನ ಮೇಲೆ 43 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಅತ್ಯಾಚಾರ ವೆಸಗಿದ ಘಟನೆ ಸೇಡಂ ಪಟ್ಟಣದಲ್ಲಿ ನಡೆದಿದೆ.
ಮಹಾಲಯ ಅಮವಾಸ್ಯೆಯ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ಮಗು ನೈಸರ್ಗಿಕ ಕರೆಗೆಂದು ಮನೆಯ ಹಿಂದುಗಡೆ ಹೋಗಿದ್ದಾಗ ಸಂತೋಷ ಯಾಕಾಪೂರ ಎಂಬಾತ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ.
ಅತ್ಯಾಚಾರಕ್ಕೆ ಒಳಗಾದ ಮಗುವನ್ನು ವೈದ್ಯಕೀಯ ಪರೀಕ್ಷೆಗೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸಂತೋಷ ಯಾಕಾಪೂರನನ್ನು ಪೊಲೀಸರು ಬಂಧಿಸಿದ್ದಾರೆ. ಸೇಡಂ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.