ಬೆಳಾಗಾವಿ: ಜಿಲ್ಲೆಯಲ್ಲಿ ಇಂದು ನಡೆಯಲಿರುವ ರಾಜ್ಯ ಕಾರ್ಯಕಾರಣಿ ಸಭೆ ಬಿಟ್ಟು ಕೇಂದ್ರ ಸಚಿವ ಅನಂತ್‍ಕುಮಾರ್ ಕಾವೇರಿ ವಿಚಾರವಾಗಿ ದಿಢೀರ್ ಅಂತಾ ದೆಹಲಿಗೆ ತೆರಳಿದ್ದಾರೆ. ಕಾವೇರಿ ನೀರು ನಿರ್ವಹಣಾ ಮಂಡಳಿ ಬಗ್ಗೆ ಸಚಿವೆ ಉಮಾಭಾರತಿ ಜತೆ ಅನಂತಕುಮಾರ್ ಮಾತುಕತೆ ನಡೆಸಲಿದ್ದಾರೆ.
ಕಾರ್ಯಕಾರಿಣಿ ಸಭೆಗೆ ಬೆಳಗಾವಿಗೆ ಆಗಮಿಸಿದ ಕೇಂದ್ರ ಸಚಿವ ಸದಾನಂದಗೌಡ, ಪಕ್ಷದ ಸಂಘಟನೆಯ ದೃಷ್ಟಿಯಿಂದ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಸಲಾಗುತ್ತದೆ. ಕಾವೇರಿ, ಮಹದಾಯಿ ಕುರಿತು ಚರ್ಚೆ ಹಾಗೂ ಕೆ.ಎಸ್ ಈಶ್ವರಪ್ಪ ಅವರಿಂದ ಸಂಗೊಳ್ಳಿ ರಾಯಣ್ಣ ಬ್ರೀಗೆಡ್ ಸ್ಥಾಪನೆ ವಿಚಾರವಾಗಿ ಚರ್ಚೆ ನಡೆಯೋ ಸಾಧ್ಯತೆಯಿದೆ. ವೈಯಕ್ತಿಕ ವಿಚಾರಕ್ಕೆ ಪಕ್ಷದಲ್ಲಿ ಮನ್ನಣೆಯಿಲ್ಲ. ಚರ್ಚೆಗೆ ಬಂದ್ರೆ ನಮ್ಮ ಅಭಿಪ್ರಾಯ ಮಂಡಿಸುತ್ತೇನೆ ಅಂತ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಸಂಗೊಳ್ಳಿ ರಾಯಣ್ಣ ಬ್ರೀಗೆಡ್ ಬಗ್ಗೆ ಯಾವುದೇ ಹೇಳಿಕೆ ನೀಡಲ್ಲ. ಕಾವೇರಿ ನಿರ್ವಹಣೆ ಮಂಡಳಿ ಸ್ಥಾಪನೆ ಮಾಡದಂತೆ ಒತ್ತಾಯ ಮಾಡಲಾಗುತ್ತದೆ. ಈ ಕುರಿತ ಪ್ರಧಾನಿಗೆ ಮನವರಿಕೆ ಮಾಡಲು ಬಿಜೆಪಿ ತಯಾರಿ ನಡೆಸಿದೆ. ಇದರಲ್ಲಿ ನಾವು ಯಾಶಸ್ವಿಯಾಗುತ್ತೇವೆ ಅಂದ್ರು.
ಇದೇ ವೇಳೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಕಾವೇರಿ ನಿರ್ವಹಣಾ ಮಂಡಳಿಗೆ ನಮ್ಮ ವಿರೋಧವಿದೆ. ಕಾವೇರಿ ಮೇಲುಸ್ತಾವಾರಿ ಸಮಿತಿ ಅಧ್ಯಕ್ಷರ ಬದಲಾವಣೆ ಆಗಬೇಕು. ಕಾವೇರಿ ಜಲಾಶಯದಲ್ಲಿ ಎಷ್ಟು ನೀರಿದೆ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ತಜ್ಞರನ್ನು ಕಳುಹಿಸಿ ಪರಿಶೀಲನೆ ನಡೆಸಬೇಕು ಅಂತ ಹೇಳಿದ್ರು.
Comments are closed.