ಮಂಡ್ಯ: ರೈತರ ಬೆಳೆಗಾಗಿ ನಾಲೆಗಳಿಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಕೆಆರ್‌ಎಸ್ ಅಣೆಕಟ್ಟೆಯ ಮುಂದೆ ಸೋಮವಾರ ಮಧ್ಯರಾತ್ರಿಯಿಂದಲೇ ಧರಣಿ ಆರಂಭಿಸಿದ್ದಾರೆ.
ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು ಎಂದು ರೈತ ಸಂಘದ ಮುಖಂಡ ಕೆ.ಎಸ್. ನಂಜುಂಡೇಗೌಡ ತಿಳಿಸಿದ್ದಾರೆ.