ಕರ್ನಾಟಕ

ಸುಪ್ರೀಂ ಆದೇಶ ಪಾಲಿಸಲೇಬೇಕು: ದೇವೇಗೌಡ

Pinterest LinkedIn Tumblr

devegowdaಬೆಂಗಳೂರು (ಅ.04): ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವ ಆದೇಶ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲನೆ ಅನಿವಾರ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನಿರ್ಧಾರ ಏನಿದೆ ಗೊತ್ತಿಲ್ಲ. ಆದರೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಅಫಿಡವಿಟ್ ಸಲ್ಲಿಸಿದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಸುಪ್ರೀಂಕೋರ್ಟ್ಗೆ ನಾವು ಯಾವತ್ತು ಅಗೌರವ ತೋರಿಲ್ಲ. ಅವರ ಆದೇಶ ಪಾಲನೆ ಮಾಡುತ್ತಲೇ ಬಂದಿದ್ದೇವೆ. ತಜ್ಞರ ಸಮಿತಿ ಕಳುಹಿಸಲು ಸುಪ್ರೀಂಕೋರ್ಟ್ ಹೇಳಿದೆ. ಸಮಿತಿಯಲ್ಲಿ ನಾಲ್ಕು ರಾಜ್ಯಗಳ ಮುಖ್ಯ ಎಂಜಿನಿಯರ್ ಇರುತ್ತಾರೆ. ನಮಗೆ ಅನ್ಯಾಯವಾಗಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಸಂದರ್ಭದಲ್ಲಿ ಅಟಾರ್ನಿ ಜನರಲ್ ಮುಕುಲ್ ರೊಹ್ಟಾಗಿಯವರಿಗೂ ದೇವೇಗೌಡರು ಅಭಿನಂದನೆ ಸಲ್ಲಿಸಿದ್ದಾರೆ.

Comments are closed.