ಕರ್ನಾಟಕ

ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ವಾಟಾಳ್ ಪ್ರತಿಭಟನೆ

Pinterest LinkedIn Tumblr

vatalaaaaaಬೆಂಗಳೂರು, ಅ. ೭- ರಾಜ್ಯದಲ್ಲಿ ವಿವಿಧ ನೀರು ವಿವಾದಗಳಿಗೆ ಸಂಬಂಧಿಸಿದಂತೆ ಹೋರಾಟ ನಡೆಸುತ್ತಿದ್ದ ಚಳವಳಿಗಾರರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯಲು ಆಗ್ರಹಿಸಿ ಅ.17ರಂದು ನಗರದ ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಕನ್ನಡಪರ ಸಂಘಟನೆಗಳ ಒಕ್ಕೂಟ ಸತ್ಯಾಗ್ರಹ ಹಮ್ಮಿಕೊಂಡಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ಕಾವೇರಿ ಜಲವಿವಾದ, ಕಳಸಾ-ಬಂಡೂರಿ, ಮಹದಾಯಿ ವಿವಾದಗಳ ಸಂದರ್ಭದಲ್ಲಿ ಸಾಕಷ್ಟು ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ಇನ್ನಿತರ ಚಳವಳಿಗಾರರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಕಾರಣ 2016 ಹಾಗೂ ಹಿಂದಿನ ವರ್ಷಗಳಲ್ಲಿ ಚಳವಳಿಗಾರರ ವಿರುದ್ಧ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಬೇಕು ಹಾಗೂ ಬಂಧಿತರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಕನ್ನ‌ಡಪರ ಸಂಘಟನೆಗಳು ರಾಜ್ಯೋತ್ಸವ ನೆಪದಲ್ಲಿ ವಸೂಲಿಗೆ ನಿಂತಿವೆ ಎಂದು ಹೇಳಿರುವ ಪೊಲೀಸ್ ಅಧಿಕಾರಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಸಂಘಟನೆಯ ವತಿಯಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದ ಅವರು, ಸರ್ಕಾರ ಹೋರಾಟಗಾರರ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ.

ನೀರು ಬಿಡುವಂತೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶ ಆಡಳಿತ ಹಾಗೂ ವಿರೋಧ ಪಕ್ಷಗಳಿಗೆ ಸಮ್ಮತವಾಗಿವೆ ವಿನಃ ಕನ್ನಡಪರ ಹೋರಾಟಗಾರರಿಗೆ ತೀರ್ಪು ಒಪ್ಪಿಗೆಯಾಗಿಲ್ಲ. ನೀರು ಬಿಡಬಾರದು ಎನ್ನುವ ನಿಲುವಿಗೆ ನಾವು ಬದ್ಧರಾಗಿದ್ದೇವೆ. ನಮ್ಮ ಹೋರಾಟ ನಮಗೆ ತೃಪ್ತಿ ತಂದಿದೆ. ಈ ಬಗ್ಗೆ ಯಾರೊಂದಿಗೂ ರಾಜಿ ಮಾತೇ ಇಲ್ಲ ಎಂದರು.

ವೇದಿಕೆಯಲ್ಲಿ ಸಾ.ರಾ.ಗೋವಿಂದು, ಪ್ರವೀಣ್ ಶೆಟ್ಟಿ, ಗಿರೀಶ್ ಗೌಡ, ಕೆ.ಆರ್. ಕುಮಾರ್ ಇತರರು ಉಪಸ್ಥಿತರಿದ್ದರು.

Comments are closed.