ಕರ್ನಾಟಕ

ಬೆಳಗಾವಿ: ಭಾರೀ ಮಳೆಗೆ ಮರ, ಕಂಬ ಉರುಳಿ 20 ಗ್ರಾಮಗಳಿಗೆ ವಿದ್ಯುತ್‌ ಕಡಿತ

Pinterest LinkedIn Tumblr

%e0%b2%b0%e0%b2%bb%e0%b2%87%e0%b2%a8ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾನುವಾರ ತಡರಾತ್ರಿಯಿಂದಲೂ ಜೋರು ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಖಾನಾಪುರ ತಾಲ್ಲೂಕಿನ ಕಣಕುಂಬಿ ಅರಣ್ಯದಲ್ಲಿ ಭಾರಿ ಮಳೆ ಬಿದ್ದಿದ್ದು, 18.5ಸೆಂ.ಮೀ ದಾಖಲಾಗಿದೆ. ವಿದ್ಯುತ್‌ ಕಂಬ ಮರಗಳು ಬಿದ್ದಿದ್ದು, 20ಕ್ಕೂ ಹೆಚ್ಚು ಗ್ರಾಮಗಳಿಗೆ ವಿದ್ಯುತ್‌ ಕಡಿತವಾಗಿದೆ. ಆಯುಧ ಪೂಜೆಗೂ ಅಡ್ಡಿಯಾಗಿದೆ.

ಬೆಳಗಾವಿ ನಗರದಲ್ಲಿ ಭಾನುವಾರ ಮಧ್ಯರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಆಯುಧಪೂಜೆ ಅಂಗವಾಗಿ ದೇವಸ್ಥಾನಗಳಿಗೆ ತೆರಳುವವರಿಗೆ ತೊಂದರೆಯಾಗುತ್ತಿದೆ. ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿಯಾಗಿದೆ.

ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಅರಣ್ಯದಲ್ಲಿ ನಿನ್ನೆ ಸಂಜೆಯಿಂದೀಚೆಗೆ 18.5 ಸೆಂ.ಮೀ ಮಳೆ ದಾಖಲಾಗಿದೆ. ಭಾರಿ ಮಳೆಗೆ ಮರಗಳು, ವಿದ್ಯುತ್ ಕಂಬಗಳು ಉರುಳಿವೆ. ಇದರಿಂದ ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ವಿದ್ಯುತ್ ಕಡಿತವಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

Comments are closed.