ಬೆಂಗಳೂರು, ಅ. ೧೪ – ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳಿಗೆ ಸಮವಸ್ರ್ತ, ಸೈಕಲ್ ಮತ್ತು ಶೂ ವಿತರಿಸುವಂತೆ ಮುಖ್ಯಮಂತ್ರಿ ಗಳು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮುಂದಿನ ವರ್ಷ ವಿತರಣೆ ಮಾಡಬೇಕಿರುವ ಸಮವಸ್ತ್ರ, ಸೈಕಲ್ ಮತ್ತು ಶೂ ಖರೀದಿಗೆ ಈಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಯವರು, ಪ್ರತಿ ವರ್ಷ ಜೂನ್ ಅಂತ್ಯದ ವೇಳೆಗಾದರೂ ಸೈಕಲ್ ಮತ್ತು ಶೂಗಳನ್ನು ವಿತರಿಸುವುದು ಸೂಕ್ತ. ಇದರಲ್ಲಿ ವಿಳಂಬ ಬೇಡ ಎಂದರು.
8,9 ಮತ್ತು 10ನೇ ತರಗತಿಯ ಹೆಣ್ಣು ಮಕ್ಕಳಿಗೆ ಸಮವಸ್ತ್ರವಾಗಿ ಚೂಡಿದಾರ್ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಗಳು ಒಪ್ಪಿಗೆ ಸೂಚಿಸಿದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಮುಖ್ಯಮಂತ್ರಿ ಗಳ ಸಂಸದೀಯ ಕಾರ್ಯದರ್ಶಿ ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ಅತೀಕ್ ಮತ್ತು ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ
Comments are closed.