ಕರ್ನಾಟಕ

ಹುಬ್ಬಳ್ಳಿ: ಪೊಲೀಸ್ ಠಾಣೆಯಲ್ಲೇ ಗುಂಡು-ತುಂಡು ಪಾರ್ಟಿ

Pinterest LinkedIn Tumblr

hubballiಹುಬ್ಬಳ್ಳಿ: ಹುಬ್ಬಳಿಯ ನವನಗರ ಪೊಲೀಸ್ ಠಾಣೆಯಲ್ಲಿಯೇ ಪೊಲೀಸರು ಗುಂಡು-ತುಂಡಿನ ಪಾರ್ಟಿ ಮಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಆದರೆ ಅಲ್ಲಿ ಪಾರ್ಟಿ ನಡದೇ ಇಲ್ಲ. ಅದು ಆಯುಧ ಪೂಜೆ ಎಂದು ಅವಳಿ ನಗರ ಪೊಲೀಸ್ ಆಯುಕ್ತರ ಕಚೇರಿ ಅಧಿಕಾರಿಗಳು ಸಮಜಾಯಿಸಿ ನೀಡುತ್ತಿದ್ದಾರೆ.
ಪೊಲೀಸ್ ಇನ್ಸ್ ಪೆಕ್ಟರ್ ಎಸ್ ಆರ್ ನಾಯಕ ವರ್ಗಾವಣೆ ರದ್ದಾಗಿದಕ್ಕೆ ನವನಗರ ಪೊಲೀಸ್ ಠಾಣೆಯಲ್ಲಿ ಈ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎನ್ನಲಾಗಿದೆ.
ಪೊಲೀಸ್ ಠಾಣೆಯಲ್ಲೇ ಪೊಲೀಸರು, ರೌಡಿ ಶೀಟರ್‍ಗಳು, ಪಾಲಿಕೆಯ ಸದಸ್ಯರು ಸೇರಿದಂತೆ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದು, ಇದರ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಈ ವರ್ತನೆಗೆ ಸಾರ್ವಜನಿಕರಿಂದ ಖಂಡನೆ ವ್ಯಕ್ತವಾಗಿದೆ.
ಗುಂಡು ತುಂಡಿನ ಪಾರ್ಟಿ ನಡೆದ ಬಗ್ಗೆ ಅವಳಿ ನಗರ ಪೊಲೀಸ್ ಆಯಕ್ತ ಪಾಂಡುರಂಗ ರಾಣೆ ಅವರು ಪ್ರತಿಕ್ರಿಯಿಸಿದ್ದು, ನವನಗರ ಪೊಲೀಸ್ ಠಾಣೆಯಲ್ಲಿ ಪಾರ್ಟಿ ಮಾಡಿರುವುದು ನಿಜ. ಆದರೆ ಅಲ್ಲಿ ಸಾರಾಯಿ ಸೇವನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಆದರೂ ಡಿಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ. ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳುಲಾಗುವುದು ಎಂದು ತಿಳಿಸಿದ್ದಾರೆ.

Comments are closed.