ಬೆಂಗಳೂರು,ಅ.೨೦-ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಶಿವಾಜಿನಗರದ ಆರ್ಎಸ್ಎಸ್ ಮುಖಂಡ ರುದ್ರೇಶ್ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ರುದ್ರೇಶ್ ಹತ್ಯೆಯಿಂದ ಕುಟುಂಬದ ಸದಸ್ಯರಿಗಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ, ಸಾಂಸದ ಪಿ.ಸಿ ಮೋಹನ್,ಮಾಜಿ ಸಚಿವ ಕಟ್ಟಾ ಸುಬ್ರಮಣ್ಯನಾಯ್ಡು ಅವರು ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು.
ಆರೋಪಿಗಳ ಬಂಧನಕ್ಕೆ ಆಗ್ರಹ
ಆರ್ಎಸ್ಎಸ್ ಮುಖಂಡ ರುದ್ರೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ನಾಲ್ಕೈದು ದಿನ ಕಳೆದಿದ್ದರೂ ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಕುಸಿದಿರುವುದಕ್ಕೆ ಇದು ಜ್ವಲಂತ ನಿದರ್ಶನ ಎಂದು ಆರೋಪಿಸಿದರು.
Comments are closed.