ಬೆಂಗಳೂರು(ಅ.20): ರಾಜರಾಜೇಶ್ವರಿನಗರದಲ್ಲಿರುವ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಒಡೆತನದ ಎಸ್.ಎಸ್. ಆಸ್ಪತ್ರೆ ವಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಸರ್ಕಾರಿ ಭೂಮಿ ಒತ್ತುವರಿ ಮಾಡಿ ಆಸ್ಪತ್ರೆ ನಿರ್ಮಿಸಿರುವ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ವಶಕ್ಕೆ ಪಡೆಯಲು ಮುಂದಾಗಿತ್ತು. ಇದಲ್ಲದೆ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ಅವರು ನೋಟಿಸ್ ಕೂಡ ಜಾರಿಗೊಳಿಸಿದ್ದರು.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ನೋಟಿಸ್ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್’ಗೆ ಮೋರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಪರಿಶೀಲಿಸಿದ ಹೈಕೋರ್ಟ್, ತಮ್ಮ ಬಳಿಯಿರುವ ದಾಖಲೆಗಳನ್ನು ಸರ್ಕಾರ ಪರಿಶೀಲಿಸಿಲ್ಲ. ಈ ಬಗ್ಗೆ ತಹಸೀಲ್ದಾರ್ ಖುದ್ದು ಪರಿಶೀಲಿಸಬೇಕು. ತಹಸೀಲ್ದಾರ್ ವರದಿ ಸಲ್ಲಿಸುವವರೆಗೂ ತೆರವಿಗೆ ತಡೆಯಾಜ್ಞೆ ನೀಡಿದೆ.
Comments are closed.