ಕರ್ನಾಟಕ

ಕಿತ್ತೂರು ಚೆನ್ನಮ್ಮ ಜಯಂತಿ ಆಚರಿಸಲು ಸಿ.ಎಂಗೆ ಮನವಿ ಸಲ್ಲಿಸಿದ ಮೃತ್ಯುಂಜಯ ಸ್ವಾಮೀಜಿ

Pinterest LinkedIn Tumblr

swami

ಬೆಂಗಳೂರು: ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಜಯಂತಿ ಕಾರ್ಯಕ್ರಮವನ್ನು ಸರ್ಕಾರದಿಂದ ಆಚರಿಸುವಂತೆ ಕೂಡಲಸಂಗಮದ ವೀರಶೈವ ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.

ಮುಖ್ಯಮಂತ್ರಿಗಳನ್ನು ಅವರ ನಿವಾಸ ಕಾವೇರಿಯಲ್ಲಿಂದು ಭೇಟಿ ಮಾಡಿದ ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ ಅವರು, ನಾಡಿನ ಸ್ವಾತಂತ್ರ್ಯ ಸಂಗ್ರಾಮಕ್ಕೆ ದೊಡ್ಡ ಕಾಣಿಕೆ ನೀಡಿರುವ ವೀರ ರಾಣಿ ಚೆನ್ನಮ್ಮ ಜಯಂತಿಯನ್ನು ಸರ್ಕಾರದಿಂದ ಆಚರಿಸುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಸ್ವಾಮೀಜಿಗಳ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯದ ಗಣಿಸಚಿವ ವಿನಯ್ ಕುಲಕರ್ಣಿ, ಶಾಸಕ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ವೀರಶೈವ ಪಂಚಮಸಾಲಿ ಸಮಾಜದ ಹಲವು ಮುಖಂಡರು ಉಪಸ್ಥಿತರಿದ್ದರು.

Comments are closed.