ಕರ್ನಾಟಕ

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಕೊಡುಗೆ; ತುಟ್ಟಿಭತ್ಯೆ ಶೇಕಡ 4.25ರಷ್ಟು ಹೆಚ್ಚಳ

Pinterest LinkedIn Tumblr

Moneyweb

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.

ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು 2012ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.4.25ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದೆ. ಜುಲೈ 1, 2016ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಹಣಕಾಸು ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಇದರಿಂದಾಗಿ 8.5 ಲಕ್ಷ ನೌಕರರ ಮಾಸಿಕ ವೇತನ ಚ್ಚಳವಾಗಲಿದೆ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರ ತಡವಾಗಿ ಹೆಚ್ಚಳ ಮಾಡಿದೆ.

Comments are closed.