ಕರ್ನಾಟಕ

ನ.10ರಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಆದೇಶ

Pinterest LinkedIn Tumblr
A gold sheet tiger’s head set with rubies, diamonds and emeralds stripped from Tipu Sultan throne after the fall of Seringapatam in 1799  had been in a London bank vault for over a century before it was rescued from obscurity by the auction house  Bonhams. 25Pubmar2009
A gold 

ಬೆಂಗಳೂರು: ಪ್ರತಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ನವೆಂಬರ್ 10ರಂದು ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಮುಂದಾಗಿದೆ.
ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 10ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 28ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಅಲ್ಲದೆ ಈ ಸಭೆಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೂ ಆಹ್ವಾನ ನೀಡಲಾಗಿದೆ.
ಪ್ರಬಲ ವಿರೋಧದ ನಡುವೆಯೂ ಈ ಬಾರಿಯೂ ಟಿಪ್ಪು ಜಯಂತಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗಷ್ಟೇ ಹೇಳಿದ್ದರು.

Comments are closed.