ಕರ್ನಾಟಕ

ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣ: ಮೂವರ ಬಂಧನ

Pinterest LinkedIn Tumblr

rudresh

ಬೆಂಗಳೂರು: ಆರ್ ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ವಾಸೀಂ, ಮುಜೀಬ್ ಹಾಗೂ ಮಜರ್ ಎಂದು ಗುರುತಿಸಲಾಗಿದ್ದು, ಕೆಎಫ್ ಡಿ ಹಾಗೂ ಎಸ್ ಡಿಪಿಐ ಸಕ್ರೀಯ ಕಾರ್ಯಕರ್ತರು ಎನ್ನಲಾಗಿದೆ.

ಕೊಲೆ ನಡೆದ ದಿನ ಮಜರ್ ಬೈಕ್ ಓಡಿಸುತ್ತಿದ್ದ ವೇಳೆ ಹಿಂದೆ ಕುಳಿತಿದ್ದ ವಾಸೀಂ ಲಾಂಗ್ ನಿಂದ ರುದ್ರೇಶ್ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಮತ್ತೊಬ್ಬ ಆರೋಪಿ ಮುಜೀಬ್ ರುದ್ರೇಶ್ ಬಗ್ಗೆ ಮಾಹಿತಿ ನೀಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರುದ್ರೇಶ್‌ನನ್ನು ಕೊಲೆಗೈದ ದುಷ್ಕರ್ಮಿಗಳು ಬೆಂಗಳೂರಿನ ಕೆ.ಜಿ.ಹಳ್ಳಿ ನಿವಾಸಿಗಳಾಗಿದ್ದು. ಅವರನ್ನು ವಶಕ್ಕೆ ತೆಗೆದುಕೊಂಡಿರುವ ವಿಶೇಷ ಪೊಲೀಸ್ ತಂಡ ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಆರೋಪಿಗಳ ಬಂಧನಕ್ಕಾಗಿ ಪೂರ್ವ ವಿಭಾಗದ ಡಿಸಿಪಿ ಸತೀಶ್‌ಕುಮಾರ್, ಈಶಾನ್ಯ ವಿಭಾಗದ ಡಿಸಿಪಿ ಡಾ.ಪಿ,ಎಸ್.ಹರ್ಷ ಅವರ ನೇತೃತ್ವದ ಆರು ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಕಳೆದ ಅ.16ರಂದು ಹಾಡಹಗಲೇ ರುದ್ರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.

Comments are closed.