ಕರ್ನಾಟಕ

ಉಕ್ಕಿನ ಸೇತುವೆ ನಿರ್ಮಾಣಕ್ಕೆ ಒಂದು ತಿಂಗಳು ತಡೆ

Pinterest LinkedIn Tumblr

national-green-tribunalಬೆಂಗಳೂರು: ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆ ಸಂಪರ್ಕ ಕಲ್ಪಿಸುವ ವಿವಾದಿತ ಉಕ್ಕಿನ ಸೇತುವೆ ನಿರ್ಮಾಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ 4 ವಾರಗಳ ತಾತ್ಕಾಲಿಕ ತಡೆ ನೀಡಿದೆ. ಇದರಿಂದಾಗಿ ನವೆಂಬರ್ 1ರಿಂದ ಯೋಜನೆ ಆರಂಭಿಸಲು ಉದ್ದೇಶಿಸಿದ್ದ ಬಿಡಿಎಗೆ ಹಿನ್ನಡೆಯಾಗಿದೆ.

ನಗರದಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕಾಗಿ 800ಕ್ಕೂ ಹೆಚ್ಚು ಮರಗಳು ನಾಶ ಮಾಡಬೇಕಾಗುತ್ತದೆ. ಹೀಗಾಗಿ ಈ ಯೋಜನೆಗೆ ತಡೆಯಾಜ್ಞೆ ನೀಡಬೇಕೆಂದು ಬೆಂಗಳೂರಿನ ನಾಗರಿಕರ ವೇದಿಕೆ ದೂರು ಸಲ್ಲಿಸಿತ್ತು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತಾತ್ಕಾಲಿಕವಾಗಿ ಕಾಮಗಾರಿ ನಿಲ್ಲಿಸುವಂತೆ ಸೂಚಿಸಿದೆ.

ರು.1761 ಕೋಟಿ ವೆಚ್ಚದಲ್ಲಿ ಉಕ್ಕಿನ ಸೇತುವೆ ನಿರ್ಮಿಸಲು ಸರ್ಕಾರ ತೀರ್ಮಾನಿಸಿದ್ದು, ನಾಗರಿಕರಿಂದ ಇದಕ್ಕೆ ವಿರೋಧ ವ್ಯಕ್ತವಾಗಿತ್ತು, ಏತನ್ಮಧ್ಯೆ, ಸೇತುವೆ ನಿರ್ಮಾಣಕ್ಕೆ ರಾಷ್ಟ್ರೀಯ ನ್ಯಾಯಮಂಡಳಿ ತಾತ್ಕಾಲಿಕ ತಡೆ ನೀಡಿರುವುದರಿಂದ ‘ಸ್ಟೀಲ್ ಫ್ಲೈಓವರ್ ಬೇಡ’ ಎಂದು ಪ್ರತಿಭಟಿಸುವವರಿಗೆ ಜಯ ಸಿಕ್ಕಿದಂತಾಗಿದೆ.

Comments are closed.