ಕರ್ನಾಟಕ

ಕೆಆರ್‍ಎಸ್‍ನಲ್ಲಿ ನೀರು ಮಟ್ಟ 50 ವರ್ಷಗಳಲ್ಲೇ ಕನಿಷ್ಟ

Pinterest LinkedIn Tumblr

krsಮಂಡ್ಯ: ದಿನದಿಂದ ದಿನಕ್ಕೆ ಕೆಆರ್‍ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು ಕಾವೇರಿ ಕೊಳ್ಳದ ಜನರಲ್ಲಿ ಆತಂಕ ಮೂಡಿಸಿದೆ.

ಈ ಬಾರಿ ಸರಿಯಾಗಿ ಮಳೆಯಾಗದ ಕಾರಣ ಕೆಆರ್‍ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಲಿಲ್ಲ. 49.4 ಟಿಎಂಸಿ ಸಾಮಥ್ರ್ಯದ ಅಣೆಕಟ್ಟೆಯಲ್ಲಿ, ಈಗ ಕೇವಲ ಒಂಬತ್ತು ಟಿಎಂಸಿಯಷ್ಟು ಮಾತ್ರ ನೀರಿದೆ. ಅದರಲ್ಲಿ 4.4 ಟಿಎಂಸಿ ನೀರನ್ನು ಡೆಡ್ ಸ್ಟೋರೇಜ್ ಎಂದು ಹೇಳಲಾಗುತ್ತೆ. ಹೀಗಾಗಿ ಕೇವಲ 4.6 ಟಿಎಂಸಿ ನೀರು ಈಗ ಲಭ್ಯವಿದೆ.

ಕಳೆದ ಸುಮಾರು ಐವತ್ತು ವರ್ಷಗಳಲ್ಲಿ ಕೆಆರ್‍ಎಸ್ ಅಣೆಕಟ್ಟೆಯಲ್ಲಿನ ನೀರು ಅಕ್ಟೋಬರ್ ತಿಂಗಳಲ್ಲಿ ಇಷ್ಟು ಕನಿಷ್ಟ ಮಟ್ಟಕ್ಕೆ ಕುಸಿದಿರಲಿಲ್ಲ. ಜೊತೆಗೆ ಅಣೆಕಟ್ಟೆಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಕೇವಲ 515 ಕ್ಯೂಸೆಕ್ ನಷ್ಟಿದೆ.

ಕ್ಯೂಸೆಕ್‌ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Secondನ ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

Comments are closed.