ಕರ್ನಾಟಕ

ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರ್ಪಡೆ ಖಚಿತ

Pinterest LinkedIn Tumblr
Mysuru district incharge minister V Srinivasaprasad during Dr B R Ambedkar’s 124th birthday celebration organized by Karnataka State Open University and Dr B R Ambedkar study and research centre at Kaveri Auditorium, Mukthagangotri in Mysuru on Friday. . -Photo / IRSHAD MAHAMMAD

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಶ್ರೀನಿವಾಸ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.

ನವೆಂಬರ್ 9 ಅಥವಾ 10ರಂದು ಬಿಜೆಪಿಗೆ ಶ್ರೀನಿವಾಸ ಪ್ರಸಾದ್ ಸೇರ್ಪಡಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಸೇರ್ಪಡೆಗೂ ಮುನ್ನ ನಂಜನಗೂಡಿನಲ್ಲಿ ನ.7ಕ್ಕೆ ಬೃಹತ್ ಸಮಾವೇಶವನ್ನು ನಡೆಸಲು ಶ್ರೀನಿವಾಸ ಪ್ರಸಾದ್ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಭಾನುವಾರ ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪ ನವರನ್ನು ಶ್ರೀನಿವಾಸ ಪ್ರಸಾದ್ ಭೇಟಿ ಮಾಡುವ ಸಾಧ್ಯತೆಯಿದೆ. ಈ ವೇಳೆ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ.

ಸಂಪುಟ ಪುನಾರಚನೆ ವೇಳೆ ತಮ್ಮನ್ನು ಕೈಬಿಟ್ಟದ್ದಕ್ಕೆ ಶ್ರೀನಿವಾಸ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸ್ಪೀಕರ್ ಕೋಳಿವಾಡ ಅವರು ಈ ರಾಜೀನಾಮೆಯನ್ನು ಅಂಗಿಕರಿಸಿದ್ದರು. ಅ.26ರಂದು ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್‍ವೈ ನಿವಾಸಕ್ಕೆ ತೆರಳಿದ್ದ ಶ್ರೀನಿವಾಸ ಪ್ರಸಾದ್ ಅರ್ಧಗಂಟೆಗೂ ಹೆಚ್ಚು ಹೊತ್ತು ಕಾಲ ಖಾಸಗಿಯಾಗಿ ಚರ್ಚೆ ನಡೆಸಿದ್ದರು.

Comments are closed.