ಕರ್ನಾಟಕ

ಪಿಎಫ್‌ಐ, ಆರೆಸ್ಸೆಸ್ ಒಂದೇ ನಾಣ್ಯದ ಎರಡು ಮುಖಗಳು: ಸಿದ್ದರಾಮಯ್ಯ

Pinterest LinkedIn Tumblr

cmsiddu-15ಬೆಂಗಳೂರು: ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯಲ್ಲಿ ಪಿಎಫ್‌ಐ ಕೈವಾಡವಿರುವುದರಿಂದ ನಿಷೇಧಿಸಬೇಕು ಎನ್ನುವ ಒತ್ತಾಯಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಆರೆಸ್ಸೆಸ್ ಕೂಡಾ ಇಂತಹದ್ದೇ ಕೃತ್ಯದಲ್ಲಿ ತೊಡಗಿದ್ದರಿಂದ ಆರೆಸ್ಸೆಸ್‌ನ್ನು ನಿಷೇಧಿಸಬೇಕೇ ಎಂದು ಪ್ರಶ್ನಿಸಿದ್ದಾರೆ.

ಉಕ್ಕಿನ ಸೇತುವೆ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ ಬೆರೆಸುತ್ತಿದೆ. ಯೋಜನೆಯಲ್ಲಿ ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಇದರಲ್ಲಿ ಭ್ರಷ್ಟಾಚಾರದ ಸುಳಿವು ಕೂಡಾ ಇಲ್ಲ ಎಂದು ತಿಳಿಸಿದ್ದಾರೆ.

ಜಾಗತಿಕ ಮಟ್ಟದ ಕಂಪೆನಿಗೆ ಉಕ್ಕಿನ ಸೇತುವೆಯ ಗುತ್ತಿಗೆ ನೀಡಲಾಗಿದ್ದು,ಇದರಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದು ಅಪ್ರತಿಮ ದೇಶಭಕ್ತ. ಟಿಪ್ಪು ಸುಲ್ತಾನ್ ಜಯಂತಿ ನಡೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Comments are closed.