ಕರ್ನಾಟಕ

ಗೋಳಗುಮ್ಮಟದಲ್ಲಿ ಖಾಸಗಿ ವ್ಯಕ್ತಿಗಳಿಂದ ಔತಣಕೂಟ?

Pinterest LinkedIn Tumblr

golaವಿಜಯಪುರ: ಇಲ್ಲಿನ ಜಗದ್ವಿಖ್ಯಾತ ಗೋಳಗುಮ್ಮಟದ ಆವರಣದಲ್ಲಿ ಕೆಲ ಖಾಸಗಿ ವ್ಯಕ್ತಿಗಳು ಶನಿವಾರ ತಡರಾತ್ರಿ ಔತಣಕೂಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ಪ್ರಾಚ್ಯ ವಸ್ತು ಇಲಾಖೆಯ ಸಿಬ್ಬಂದಿಯೊಬ್ಬರು ಇದರಲ್ಲಿ ಪಾಲ್ಗೊಂಡಿರುವುದು ತಿಳಿದುಬಂದಿದ್ದು ಸುದ್ದಿ ತಿಳಿದ ತಕ್ಷಣ ವಿಜಯಪುರ ಉಪ ವಿಭಾಗಾಧಿಕಾರಿ ಪರಶುರಾಮ ಮಾದರ ಅವರು ಸ್ಥಳಕ್ಕೆ ಧಾವಿಸಿ ಅಲ್ಲಿದ್ದವರನ್ನು ಹೊರಕ್ಕೆ ಕಳಿಸಿದರು. ಜತೆಗೆ ಔತಣ ಕೂಟ ಏರ್ಪಡಿಸಿದ್ದ ವ್ಯಕ್ತಿಗಳಿಂದ ಮುಚ್ಚಳಿಕೆ ಬರೆಸಿಕೊಂಡರು. ಪ್ರಾಚ್ಯ ವಸ್ತು ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯ ಪ್ರಾಚ್ಯವಸ್ತು ಇಲಾಖೆಯ ಕಾನೂನಿನ ಪ್ರಕಾರ ಸಂಜೆ ಆರು ಗಂಟೆಯ ಬಳಿಕ ಗೋಳಗುಮ್ಮಟದ ಆವರಣವನ್ನು ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಬಗ್ಗೆ ತನಿಖೆ ನಡೆದಿದ್ದು ಭಾನುವಾರ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಗೋಳಗುಮ್ಮಟ ಪೊಲೀಸ್‌ ಠಾಣೆಯ ಮೂಲಗಳು ಪ್ರಜಾವಾಣಿಗೆ ತಿಳಿಸಿವೆ.

Comments are closed.