ಕರ್ನಾಟಕ

ಟಿಪ್ಪು ಜಯಂತಿಗೆ ಸಕಲ ಸಿದ್ಧತೆ

Pinterest LinkedIn Tumblr
A gold sheet tiger’s head set with rubies, diamonds and emeralds stripped from Tipu Sultan throne after the fall of Seringapatam in 1799  had been in a London bank vault for over a century before it was rescued from obscurity by the auction house  Bonhams. 25Pubmar2009
A gold

ಬೆಂಗಳೂರು, ಅ. ೯- ಟಿಪ್ಪು ಜಯಂತಿ ಆಚರಣೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿರುವ ನಡುವೆಯೇ ಜಯಂತಿ ಆಚರಣೆಗೆ ಸರ್ಕಾರ ಸಕಲ ಸಿದ್ಧತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ.
ನಾಳೆ ನಡೆಯಲಿರುವ ಟಿಪ್ಪು ಜಯಂತಿ ಸಂದರ್ಭದಲ್ಲಿ ಎ

ಲ್ಲಿಯಾದರೂ ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಭಜರಂಗದಳದಿಂದ ಅನಾಹುತಗಳು ಸಂಭವಿಸಿದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದಿಲ್ಲಿ ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

ಆರ್‌ಎಸ್‌ಎಸ್, ಬಿಜೆಪಿ ಹಾಗೂ ಭಜರಂಗದಳದ ಸಂಘಟನೆಗಳು ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಕುಟಿಲ ಪ್ರಯತ್ನ ಮಾಡುತ್ತಿದ್ದಾರೆ. ನಾಳೆ ಜಯಂತಿ ವೇಳೆ ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋಮು ಸಾಮರಸ್ಯವನ್ನು ಹಾಳು ಮಾಡುವವರೆ ಬಿಜೆಪಿ ಮತ್ತು ಸಂಘ ಪರಿವಾರದವರು ಎಂದು ನೇರವಾಗಿ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪ ಡೊಂಗಿ

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒಬ್ಬ ಡೊಂಗಿ ರಾಜಕಾರಣಿ. ಕೆಜೆಪಿ ಪಕ್ಷದಲ್ಲಿದ್ದಾಗ ಟಿಪ್ಪು ಸುಲ್ತಾನನ್ನು ಹಾಡಿ ಹೊಗಳಿ ಬಿಜೆಪಿಗೆ ಬಂದಾಗ ಟಿಪ್ಪುವನ್ನು ವಿರೋಧಿಸುತ್ತಿದ್ದಾರೆ. ಟಿಪ್ಪುಸುಲ್ತಾನ್ ಬಗ್ಗೆ ದ್ವಂದ್ವ ನಿಲುವು ಪ್ರದರ್ಶಿಸುತ್ತಿದ್ದಾರೆ ಎಂದು ಹರಿಹಾಯ್ದರು ಕೆಜೆಪಿಯಲ್ಲಿದ್ದಾಗ ಟಿಪ್ಪುಸುಲ್ತಾನ್ ಬಗ್ಗೆ ಹಾಡಿ ಹೊಗಳಿರುವುದು ಜಗತ್ತಿಗೆ ಗೊತ್ತಿದೆ. ಈಗ ರಾಜಕಾರಣ ಮಾಡುವುದಕ್ಕಾಗಿಯೇ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ. ನಾಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಯಡಿಯೂರಪ್ಪ ಮತ್ತವರ ಪರಿಹಾರದವರೇ ನೇರ ಹೊಣೆ ಎಂದು ಎಚ್ಚರಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಜಗದೀಶ್‌ಶೆಟ್ಟರ್, ಉಪನಾಯಕ ಆರ್. ಅಶೋಕ್, ಟಿಪ್ಪು ಧರಿಸುವ ಟೋಪಿ ಹಾಕಿಕೊಂಡು ಫೋಸ್ ನೀಡುತ್ತಿದ್ದನ್ನು ಜನ ಮರೆತಿಲ್ಲ. ಟಿಪ್ಪು ಬಗ್ಗೆ ಆಗ ಪ್ರೀತಿ ಅಭಿಮಾನ ಕಾಳಜಿ ಮೆರೆದು ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ನಾಳಿನ ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ಎಲ್ಲ ಸಿದ್ಧತೆಗಳು ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ನಾಳೆ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿ, ಆರ್‌ಎಸ್‌ಎಸ್. ಭಜರಂಗದಳ ಸಮಾಜದಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ. ನಾಳೆ ಅಹಿತಕರ ಘಟನೆ ಸಂಭವಿಸಿದರೆ ಇವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ನಾಳೆ ಟಿಪ್ಪು ಜಯಂತಿ ಆಚರಣೆಗೆ ಸರ್ಕಾರದಿಂದ ಎಲ್ಲ ಕ್ರಮ.
ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದರೆ ಮುಲಾಜಿಲ್ಲದೆ ಕ್ರಮ.
ಬಿಜೆಪಿ ಆರ್‌ಎಸ್‌ಎಸ್ ಹಾಗೂ ಭಜರಂಗದಳ ಕೋಮು ಸಾಮರಸ್ಯ ಕದಡುವ ಪ್ರಯತ್ನ.
ಅಂತಹ ಪ್ರಯತ್ನಗಳು ನಡೆದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ.
ಯಡಿಯೂರಪ್ಪ ಡೊಂಗಿ
ರಾಜಕಾರಣಿ.
ಟಿಪ್ಪು ಬಗ್ಗೆ ಜಗದೀಶ್‌ಶೆಟ್ಟರ್ ಹಾಗೂ ಅಶೋಕ್ ದ್ವಂದ್ವ ನೀತಿ.
ನಾಳೆ ಅಪ್ಪಿತಪ್ಪಿ ಅನಾಹುತಗಳು ಸಂಭವಿಸಿದರೆ ಬಿಜೆಪಿ, ಆರ್‌ಎಸ್‌ಎಸ್, ಭಜರಂಗದಳವೆ ನೇರ ಹೊಣೆ.

Comments are closed.