ಕರ್ನಾಟಕ

500 ಮತ್ತು 1,000 ರೂ. ನೋಟುಗಳನ್ನು ಬದಲಿಸುವುದು ಹೇಗೆ?

Pinterest LinkedIn Tumblr

exchangeಬೆಂಗಳೂರು: ಕೇಂದ್ರ ಸರ್ಕಾರ ಮಂಗಳವಾರ ಮಧ್ಯರಾತ್ರಿಯಿಂದ ₹500 ಮತ್ತು ₹1,000 ಮುಖಬೆಲೆಯ ನೋಟುಗಳ ಚಲಾವಣೆ ರದ್ದುಪಡಿಸಿರುವುದರಿಂದ ನಿಮ್ಮಲ್ಲಿರುವ ₹ 500, ₹ 1,000 ನೋಟುಗಳನ್ನು ಬ್ಯಾಂಕ್‌, ಅಂಚೆ ಕಚೇರಿಗಳಲ್ಲಿ ಬದಲಾಯಿಸಿಕೊಳ್ಳಬಹುದಾಗಿದೆ.

ನೋಟು ಬದಲಿಸಬೇಕಾದರೆ ನೀವು ಮಾಡಬೇಕಿರುವುದೇನು?
* ₹ 500, ₹ 1,000 ಮುಖಬೆಲೆಯ ನೋಟುಗಳನ್ನು ಬ್ಯಾಂಕ್‌ ಅಥವಾ ಅಂಚೆ ಕಚೇರಿ ಖಾತೆಗೆ ಜಮಾ ಮಾಡಲು ಡಿಸೆಂಬರ್‌ 30ರವರೆಗೆ ಅವಕಾಶ. ಜಮಾ ಮೊತ್ತಕ್ಕೆ ಮಿತಿ ಇಲ್ಲ.

* ₹ 500, ₹ 1,000 ನೋಟುಗಳನ್ನು ಬ್ಯಾಂಕ್‌, ಅಂಚೆ ಕಚೇರಿಗಳಲ್ಲಿ ಬದಲಾಯಿಸಿಕೊಳ್ಳಲೂ ಅವಕಾಶ ಇದೆ. ಹೀಗೆ ಮಾಡುವಾಗ ಗುರುತಿನ ಚೀಟಿ ತೋರಿಸಬೇಕು.

* ಆಧಾರ್‌, ಪ್ಯಾನ್‌, ಮತದಾರರ ಗುರುತಿನ ಚೀಟಿಗಳಲ್ಲಿ ಯಾವುದಾದರೂ ಒಂದನ್ನು ತೋರಿಸಬಹುದು.

* ದಿನಕ್ಕೆ ಗರಿಷ್ಠ ₹ 4,000ವರೆಗೆ ಮಾತ್ರ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು.

* ನೋಟು ಬದಲಾವಣೆ ಮಾಡಬೇಕಾದರೆ ನಿರ್ದಿಷ್ಟ ಜಮಾ ಚೀಟಿ ಭರ್ತಿ ಮಾಡಿ ಬ್ಯಾಂಕ್ ‍ಗೆ ಸಲ್ಲಿಸಬೇಕು.

ನಿರ್ದಿಷ್ಟ ಜಮಾ ಚೀಟಿಯನ್ನು ಇಲ್ಲಿ ಡೌನ್‍ಲೋಡ್ ಮಾಡಿಕೊಳ್ಳಿ.

ಹಣ ಪಡೆಯುವುದಕ್ಕೆ ಮಿತಿ

* ಬ್ಯಾಂಕಿನಿಂದ ದಿನವೊಂದಕ್ಕೆ ಗರಿಷ್ಠ ₹ 10 ಸಾವಿರ, ವಾರಕ್ಕೆ ಗರಿಷ್ಠ ₹ 20 ಸಾವಿರ ಪಡೆಯಬಹುದು.

* ಎಟಿಎಂ ಯಂತ್ರದಿಂದ ದಿನಕ್ಕೆ ಗರಿಷ್ಠ ₹ 2,000 ಮಾತ್ರ ತೆಗೆದುಕೊಳ್ಳಬಹುದು. ಮುಂದಿನ ದಿನಗಳಲ್ಲಿ ಇದನ್ನು ₹ 4,000ಕ್ಕೆ ಹೆಚ್ಚಿಸಲಾಗುವುದು.

* ಬ್ಯಾಂಕ್‌ನಿಂದ ಹಣ ಪಡೆಯಲು ಹೇರಿರುವ ಮಿತಿಯನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಲಾಗುವುದು ಎಂದು ಸರ್ಕಾರ ಹೇಳಿದೆ.

Comments are closed.