ಕರ್ನಾಟಕ

ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳನ್ನು ಮಠದ ಪೀಠದಿಂದ ಕೆಳಗಿಳಿಸಿ: ಹೈಕೋರ್ಟ್‌

Pinterest LinkedIn Tumblr

Raghvaeshwara Swamiji of Ramachandrapura Matt of Hosnagar addressing the media about the Ramakatha spiritual programme which will start from Saturday in Gulbarga on Thursday. -Photo/ Krishnakumar P.S

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠದ ಪೀಠಾಧ್ಯಕ್ಷ ಸ್ಥಾನದಿಂದ ರಾಘವೇಶ್ವರ ಸ್ವಾಮೀಜಿ ಅವರನ್ನು ಕೆಳಗಿಸಿ, ಆಡಳಿತಾಧಿಕಾರಿಯನ್ನು ನೇಮಿಸುವ ಕುರಿತ ಮನವಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರುವ ಸರಕಾರದ ಕ್ರಮವನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಸರ್ಕಾರ ಎಷ್ಟು ದಿನವಾದರೂ ಮನವಿಯನ್ನು ಏಕೆ ಹಾಗೆಯೇ ಬಾಕಿ ಇಟ್ಟುಕೊಂಡಿದೆ ಎಂದು ಪೀಠ ತರಾಟೆಗೆ ತೆಗೆದುಕೊಂಡಿತು. ಸರ್ಕಾರ ಹಾಗೂ ಮುಖ್ಯ ಕಾರ್ಯದರ್ಶಿ ಆ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲು ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ನ.21ಕ್ಕೆ ಮುಂದೂಡಿತು.

ಅರ್ಜಿದಾರರು, ರಾಘವೇಶ್ವರ ಸ್ವಾಮೀಜಿ ವಿರುದ್ಧ ಅತ್ಯಾಚಾರ ಆರೋಪವಿರುವ ಹಿನ್ನೆಲೆಯಲ್ಲಿ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಪಿಐಎಲ್‌ ಸಲ್ಲಿಸಿದ್ದರು.

ರಾಘ್ವವೇಶ್ವರ ಶ್ರೀಗಳು ಶೀಲಗೆಟ್ಟ ಸಂಬಂಧ ಹೊಂದಿದ್ದರು ಎಂಬ ಸಂಗತಿ ಈಗಾಗಲೇ ಅಧೀನ ನ್ಯಾಯಾಲಯದಲ್ಲಿ ತೀರ್ಮಾನವಾಗಿದ್ದರೇ ದಯಾಮಾಡಿ ಅವರನ್ನು ಪೀಠದಿಂದ ಕೆಳಗಿಳಿಸಿ, ನನ್ನ ಆತ್ಮ ಸಾಕ್ಷಿಗೆ ಆಘಾತವಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಏ.28ರಂದು ಮೊದಲ ಬಾರಿಗೆ ಪಿಐಎಲ್‌ ವಿಚಾರಣೆಗೆ ಬಂದಾಗ, ರಾಘವೇಶ್ವರ ಸ್ವಾಮೀಜಿ, ಸರಕಾರ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನ್ಯಾಯಪೀಠ ನೋಟಿಸ್‌ ಜಾರಿಗೊಳಿಸಿತ್ತು. ಅಲ್ಲದೆ, ಅರ್ಜಿದಾರರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಬೇಕು, ಅವರು ಎರಡೂ ಕಡೆ ವಾದ-ಪ್ರತಿವಾದ ಆಲಿಸಿ ಆದಷ್ಟು ಬೇಗ ಸೂಕ್ತ ಆದೇಶವನ್ನು ಹೊರಡಿಸಬೇಕು ಎಂದು ಆದೇಶ ನೀಡಿತ್ತು.

Comments are closed.