ಕರ್ನಾಟಕ

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ

Pinterest LinkedIn Tumblr

Belgaum_adhiveshan_Suvarna_ಬೆಂಗಳೂರು: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ. ಉತ್ತರ ಕರ್ನಾಟಕದ ಹಲವು ಸಮಸ್ಯೆಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರುವ ನಿರೀಕ್ಷೆಯಿದೆ.

ಮಹಾದಾಯಿ ವಿವಾದ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ನೋಟು ನಿಷೇಧ ವಿಚಾರದಲ್ಲಿ ವಿಪಕ್ಷ ಬಿಜೆಪಿಯ ಕಾಲೆಳೆಯಲು ಕಾಂಗ್ರೆಸ್ ಲೆಕ್ಕಾಚಾರ ಹಾಕಿದಂತಿದೆ.

ಅಧಿವೇಶನದಲ್ಲಿ ಭಾಗವಹಿಸುವುದು ಪ್ರತಿಯೊಬ್ಬ ಶಾಸಕನ ಜವಾಬ್ದಾರಿ. ಎಲ್ಲಾ ಶಾಸಕರೂ ಬೆಳಿಗ್ಗೆ ಮತ್ತು ಮಧ್ಯಾಹ್ನ ಸದನಕ್ಕೆ ಹಾಜರಾಗಿ ಸಹಿ ಹಾಕಿಬೇಕು ಎಂದು ಸ್ಪೀಕರ್ ಕೋಳಿವಾಡ ಹೇಳಿದ್ದಾರೆ.

Comments are closed.