ಕರ್ನಾಟಕ

ಶೇ.30ರಷ್ಟು ಕಮಿಷನ್ ಪಡೆದು ಕಪ್ಪು ಹಣ ಬಿಳಿ ಮಾಡುತ್ತಿದ್ದ ಗ್ಯಾಂಗ್ ಬಂಧನ

Pinterest LinkedIn Tumblr

arrestedಬೆಂಗಳೂರು: ಓರ್ವ ಬಟ್ಟೆ ವ್ಯಾಪಾರಿ ಸೇರಿದಂತೆ ಶೇ.30ರಷ್ಟು ಕಮಿಷನ್ ಪಡೆದು ಕಪ್ಪು ಹಣವನ್ನು ಬಿಳಿ ಮಾಡುತ್ತಿದ್ದ ಮೂವರ ಗ್ಯಾಂಗ್ ಅನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಅಲ್ಲದೆ ಈ ಸಂಬಂಧ ಇಬ್ಬರು ಬ್ಯಾಂಕ್ ಸಿಬ್ಬಂದಿಯನ್ನು ಸಹ ವಶಕ್ಕೆ ಪಡೆಯಲಾಗಿದೆ.
ಪೊಲೀಸರು ಬಂಧಿತರಿಂದ ಹೊಸ ಹಾಗೂ ಹಳೆ ನೋಟ್ ಸೇರಿದಂತೆ 50 ಲಕ್ಷ ರುಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಬ್ಯಾಂಕ್ ಸಮೀಪ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಗಳನ್ನು ಮನೋಜ್ ಕುಮಾರ್ ಸಿಂಗ್ ಹಾಗೂ ಆತನ ಸಹಚರ ಎಂದು ಗುರುತಿಸಲಾಗಿದ್ದು, ಇಬ್ಬರೂ ಚಿಕ್ಕಪೇಟೆ ನಿವಾಸಿಗಳಾಗಿದ್ದಾರೆ. ಆರೋಪಿಗಳನ್ನು ರೆಸಿಡೆನ್ಸಿ ರಸ್ತೆಯಲ್ಲಿ ಟೆಕ್ಸ್ ಟೈಲ್ಸ್ ಅಂಗಡಿಗಳನ್ನು ಹೊಂದಿದ್ದಾರೆ.
ಖಚಿತ ಮಾಹಿತಿಯನ್ನು ಆಧರಿಸಿ ಕಾಟನ್ ಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಪ್ಪು ಬಿಳಿ ಮಾಡುತ್ತಿದ್ದ ಗ್ಯಾಂಗ್ ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ಮನೋಜ್ ಕುಮಾರ್ ಸಿಂಗ್ ಅವರು ರಿಯಲ್ ಎಸ್ಟೇಟ್ ಹಾಗೂ ದೊಡ್ಡ ದೊಡ್ಡ ಉದ್ಯಮಿಗಳನ್ನು ಸಂಪರ್ಕಿಸಿ ಕಮಿಷನ್ ಪಡೆದು ಕಪ್ಪು ಹಣವನ್ನು ಬಿಳಿ ಮಾಡಿಕೊಡುವುದಾಗಿ ಹೇಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Comments are closed.