
ಬೆಂಗಳೂರು: ಪತಿಯ ಮುಂದೆಯೇ 28 ವರ್ಷದ ಮಹಿಳೆ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ತಮಿಳುನಾಡು ಮೂಲದ ರಾಜು, ಮಣಿ ಮತ್ತು ವಿನೋದ್ ಎಂಬುವರನ್ನು ಬಂಧಿಸಿದ್ದಾರೆ.
ಸ್ಥಳೀಯ ಕೋಳಿ ಫಾರಂ ನಲ್ಲಿ ಕೆಲಸ ಮಾಡುವ ಈ ಮೂವರು ವ್ಯಕ್ತಿಗಳು ಮಂಗಳವಾರ ರಾತ್ರಿ ಮಹಿಳೆಯ ಮನೆಗೆ ನುಗ್ಗಿದ್ದಾರೆ. ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿ, ಚಾಕು ತೋರಿಸಿ ಬೆದರಿಕೆ ಹಾಕಿ, ಆಕೆಯ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಎಂದು ಮಹಿಳೆ ನೀಡಿರುವ ದೂರಿನಲ್ಲಿ ಉಲ್ಲೇಖವಾಗಿದೆ.
ಘಟನೆಗೆ ಈ ದಂಪತಿಯ ಮಗುವು ಸಾಕ್ಷಿಯಾಗಿದೆ. ಕೃತ್ಯದ ನಂತರ ಸ್ಥಳೀಯರ ಸಹಾಯದಿಂದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಘಾತಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Comments are closed.