ಮಂಡ್ಯ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರದಂದು ನಡೆದಿದೆ.
ಮಂಡ್ಯ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ. 24 ವರ್ಷದ ಪ್ರಿಯಾಂಕ ಮೃತ ಗೃಹಿಣಿ, ನಾಲ್ಕು ತಿಂಗಳ ಹಿಂದೆಯಷ್ಟೇ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದ ಪ್ರಿಯಾಂಕ ನಾಗಮಂಗಲ ತಾಲ್ಲೂಕು ದೇವಿಹಳ್ಳಿಯ ದೀಪಕ್ ಅವರನ್ನು ಮದುವೆ ಆಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪ್ರಿಯಾಂಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದು, ಪೊಲೀಸರು ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಮಂಡ್ಯ ಪಶ್ಚಿಮ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.