ಕರ್ನಾಟಕ

ರಾಜ್ಯ ಸರಕಾರಕ್ಕೆ ಡಿ.ಕೆ ರವಿ ನಿಗೂಢ ಸಾವಿನ ಪ್ರಕರಣದ ತನಿಖಾ ವರದಿ ಸಲ್ಲಿಕೆ; ವರದಿಯಲ್ಲಿ ಇರುವುದು ಏನು…?

Pinterest LinkedIn Tumblr

ravi

ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸಿದ ಸಿಬಿಐ 20 ತಿಂಗಳ ನಂತರ ವರದಿ ನೀಡಿದ್ದು, ಅದನ್ನು ಬೆಂಗಳೂರು ದಕ್ಷಿಣ ವಿಭಾಗದ ಸಹಾಯಕ ಆಯುಕ್ತ ಟಿ.ಡಿ ನಟೇಶ್ ಅವರು ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಟಿ.ಡಿ ನಟೇಶ್ ಅವರು ಇಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ಅವರನ್ನು ಭೇಟಿ ಮಾಡಿ ಸುಮಾರು 90 ಪುಟಗಳ ವರದಿಯನ್ನು ಸಲ್ಲಿಸಿದರು.

ವರದಿ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ನಟೇಶ್ ಅವರು, ಸಿಬಿಐ ಸಲ್ಲಿಸಿದ ತನಿಖಾ ವರದಿಯ ಒಂದು ಪ್ರತಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಮಾತ್ರ ತಿಳಿಸಿದರು,

ವೈಯಕ್ತಿಕ ಕಾರಣಗಳಿಂದಾಗಿಯೇ ಡಿ.ಕೆ ರವಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ತನ್ನ ವರದಿಯಲ್ಲಿ ಸಷ್ಪಪಡಿಸಿದೆ. ಯಾವುದೇ ಒಂದು ಅಸ್ವಾಭಾವಿಕ ಸಾವಿನ ಪ್ರಕರಣದಲ್ಲಿ ತನಿಖೆ ಮುಗಿದ ನಂತರ ವರದಿಯನ್ನು ಮ್ಯಾಜಿಸ್ಟ್ರೇಟ್ ಗೆ ಸಲ್ಲಿಸುವುದು ವಾಡಿಕೆ. ಆದರೆ ಈ ಪ್ರಕರಣದಲ್ಲಿ ಅಸಿಸ್ಟೆಂಟ್ ಕಮಿಷನರ್ ಗೆ ವರದಿ ಸಲ್ಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ 16, 2015 ರಂದು ಐಎಎಸ್ ಅಧಿಕಾರಿ ಡಿ.ಕೆ ರವಿ ತಮ್ಮ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅನಂತರ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಪ್ರತಿಪಕ್ಷಗಲು ಕೂಡ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದವು. ಅಲ್ಲದೆ ಪ್ರಕರಣವನ್ನು ಸಿಬಿಐ ವಹಿಸುವಂತೆ ಒತ್ತಾಯಿಸಿದ್ದರು.

Comments are closed.