ಕರ್ನಾಟಕ

ಸಂವಿಧಾನದ ಮೌಲ್ಯ ತಿಳಿಯಿರಿ: ಯಡಿಯೂರಪ್ಪ

Pinterest LinkedIn Tumblr

yaddiಬೆಂಗಳೂರು, ನ. ೨೬- ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆಯಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹೇಳಿದರು.
ಬಿಜೆಪಿ ಕಚೇರಿಯಲ್ಲಿಂದು ನಡೆದ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಳಧನ ಮತ್ತು ಭ್ರಷ್ಟಾಚಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಸಮರ ಸಾರಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ಸಂವಿಧಾನದ ಮೌಲ್ಯಗಳನ್ನು ಅರಿತು ನಡೆಯಬೇಕಿದೆ ಎಂದರು.
ಭಾರತದ ಸಂವಿಧಾನದ ಮೂಲ ತತ್ವ ವಿವಿಧತೆಯಲ್ಲಿ ಏಕತೆಯಾಗಿದೆ. ಸಂವಿಧಾನ ನಮ್ಮ ಧರ್ಮಗ್ರಂಥವಿದ್ದಂತೆ ಎಂದರು.
ನಮ್ಮ ಸಂವಿಧಾನದ ಆಶಯ ಆಶೋತ್ತರಗಳನ್ನು ಜಗತ್ತಿನ ಹಲವು ಯಶಸ್ವಿ ಪ್ರಜಾಪ್ರಭುತ್ವ ದೇಶಗಳ ಸಂವಿಧಾನದಲ್ಲೂ ಅಳವಡಿಸಿಕೊಳ್ಳಲಾಗಿದೆ. ಭಾರತದ ಸಂವಿಧಾನ ಜಗತ್ತಿನಲ್ಲೇ ಉತ್ತಮ ಸಂವಿಧಾನ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ನ.26ರಂದು ಸಂವಿಧಾನ ದಿವಸವನ್ನು ಘೋಷಿಸಿದರು. ಅದರಂತೆ ಪ್ರತಿವರ್ಷ ಸಂವಿಧಾನ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದರು.
ಭವ್ಯ ಭಾರತದ ಸಮೃದ್ಧ ಕರ್ನಾಟಕದ ಕನಸನ್ನು ನನಸಾಗಿಸಲು ಬಿಜೆಪಿ ಪಕ್ಷ ಬದ್ಧವಾಗಿದೆ. ಈ ದಿಶೆಯಲ್ಲಿ ಎಲ್ಲರೂ ಕ್ಷಮಿಸಬೇಕೆಂದು ಯಡಿಯೂರಪ್ಪ ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Comments are closed.