ಕರ್ನಾಟಕ

ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ: ಓರ್ವನ ಸೆರೆ

Pinterest LinkedIn Tumblr

sexxxಬೆಂಗಳೂರು,ಡಿ.೨-ಶೇಷಾದ್ರಿಪುರಂನ ಕರಾವಳಿ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದಾರೆ.
ಅರಸಿಕೆರೆ ತಾಲ್ಲೂಕಿನ ಚಗಚಗೆರೆಯ ಸಿ.ಎಸ್. ಪ್ರದೀಪ್(೨೮)ಬಂಧಿತ ಆರೋಪಿಯಾಗಿದ್ದಾನೆ,ಬಂಧಿತನಿಂದ ೬ ಸಾವಿರ ೪೫೦ ರೂ,೨ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಪಶ್ಚಿಮ ಬಂಗಾಳದ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಆರೋಪಿ ಪ್ರದೀಪ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ರವಿ ಜೊತೆ ಸೇರಿ ನಗರದಲ್ಲಿ ಹೆಚ್ಚಿನ ಸಂಬಳದ ಕೆಲಸ ಕೊಡಿಸುವುದಾಗಿ ಪಶ್ಚಿಮ ಬಂಗಾಳದಿಂದ ಬಡ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆಯ ದಂಧೆ ನಡೆಸುತ್ತಿರುವುದು ತನಿಖೆಯಲ್ಲಿ ಗೊತ್ತಾಗಿದೆ.

Comments are closed.