ರಾಮನಗರ: ಪ್ರವಾಸಕ್ಕೆ ಹೊರಟಿದ್ದ ಶಾಲಾ ಮಕ್ಕಳ ಬಸ್‍ಗೆ ಬೆಂಕಿ ಬಿದ್ದ ಘಟನೆ ಜಿಲ್ಲೆಯಲ್ಲಿ ಇಂದು ನಡೆದಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ನ ಬಿಎಂಲ್ ಶಾಲೆಯ 40 ವಿದ್ಯಾರ್ಥಿಗಳು ಬಿಎಂಟಿಸಿ ಬಸ್‍ನಲ್ಲಿ ಇಂದು ತಲಕಾಡಿಗೆ ಪ್ರವಾಸ ಹೊರಟಿದ್ದರು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಮುದಗೆರೆ ಬಳಿ ಬಸ್‍ಗೆ ಬೆಂಕಿ ಹತ್ತಿಕೊಂಡಿದ್ದು, ಮಕ್ಕಳ ಲಗೇಜ್ ಜೊತೆ ಬಸ್ ಭಸ್ಮಗೊಂಡಿದೆ.
ಕೂಡಲೇ ಗ್ರಾಮಾಂತರ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟರು. ಎಂಜಿನ್ ತಾಂತ್ರಿಕ ದೋಷದಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನುವ ವಿಚಾರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.