ಕರ್ನಾಟಕ

‘ಕಾಯಿಲೆ ವಾಸಿಗೆ ಕತ್ತೆ ಹಾಲು ಕುಡಿ’ ಏನಿದು ವಿಶೇಷ, ….. ಮುಂದೆ ಓದಿ….!

Pinterest LinkedIn Tumblr

donkey_milk_pic

ಮಂಗಳೂರು: ಕತ್ತೆ ಎಂಬುದು ಅಪಹಾಸ್ಯಕ್ಕೊಳಗಾದ ಪ್ರಾಣಿಯೂ ಹೌದು. ಆದರೆ, ಕತ್ತೆಯ ಹಾಲಿನ ಪೌಷ್ಟಿಕಾಂಶದ ಗುಣ ನಗೆಯ ವಿಷಯವಲ್ಲ. ಕತ್ತೆಯ ಹಾಲೇ ಈಜಿಪ್ಟಿನ ರಾಜಕುಮಾರಿ ಕ್ಲಿಯೋಪಾತ್ರಾಳ ಮಿಂಚುವ ಸೌಂದರ್ಯಕ್ಕೆ ಕಾರಣವಾಗಿತ್ತೆನ್ನಲಾಗಿದೆ. ನವಜಾತ ಶಿಶುಗಳಿಗೆ ಉತ್ತಮ ಔಷಧೀಯ ಸತ್ತ್ವ ಕತ್ತೆಯ ಹಾಲಿನಲ್ಲಿದೆಯೆಂಬುದು ಬಹುತೇಕರ ನಂಬಿಕೆ. ಕತ್ತೆಯ ಹಾಲು ತಾಯಿಯ ಹಾಲಿಗೆ ಸಮಾನವಾದುದಾದರೂ, ಅದರಲ್ಲಿ ಪ್ರೋಟೀನ್ ಹಾಗೂ ಕೊಬ್ಬಿನಾಂಶ ಕಡಿಮೆಯಿದ್ದು, ಲ್ಯಾಕ್ಟೋಸ್‌ನ ಅಂಶ ಹೆಚ್ಚಿದೆ. ಕತ್ತೆಯ ಹಾಲು ಅಸ್ತಮಾದಿಂದ ಬಳಲುವ ನವಜಾತ ಶಿಶುಗಳಿಗೆ ಅತ್ಯುತ್ತಮ ಔಷಧಿ, ಕ್ಷಯ ಹಾಗೂ ಗಂಟಲು ಬೇನೆಗಳನ್ನು ಅದು ನಿವಾರಿಸುತ್ತದೆಂದು ಆಯುರ್ವೇದದ ತಜ್ಞರೂ ಹೇಳಿರುವುದರಿಂದ ಅದಕ್ಕೆ ಬೇಡಿಕೆ ಕುದುರಿದೆ.

ಕತ್ತೆಹಾಲು ಬೇಕಾ ಕತ್ತೆ ಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್‌, ಚಿಕ್ಕೋರ್‌ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ,ಇದು ಒಂದು ಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿದೊಡನೇ ಮಹಿಳೆಯರು ಅಡುಗೆ ಮನೆಯಲ್ಲಿದ್ದ ಪುಟ್ಟ ಲೋಟವನ್ನು ಒಂದು ಕೈಲಿ ಹಿಡಿದು ಕಂಕುಳಲ್ಲಿ ಮಗುವನ್ನು ಇನ್ನೊಂದು ಕೈಲಿ ಹಿಡಿದುಕೊಂಡು ಓಡುತ್ತಿದ್ದುದು ಮತ್ತೂ ವಿಶೇಷವಾಗಿತ್ತು.

“ಕಾರ್ಯವಾಸಿ ಕತ್ತೆಕಾಲು ಹಿಡಿ’ ಎಂಬ ಹಳೆಗಾದೆಯನ್ನು ಈಗ ‘ಕಾಯಿಲೆ ವಾಸಿಗೆ ಕತ್ತೆ ಹಾಲು ಕುಡಿ’ ಎಂದು ಬದಲಾಯಿಸಿಕೊಳ್ಳುವಂತೆ ಕತ್ತೆಹಾಲು ಮಾರಾಟವಾಗುತ್ತಿದೆ. ಇತ್ತ 25 ರೂಗಳಿಗೆ ಒಂದು ಲೀಟರ್‌ ಹಸುವಿನ ಹಾಲು ಕೊಡುತ್ತೀವಿ ಎಂದರೂ ಮುಖ ಹಾಯಿಸದ ಜನರು ಕತ್ತೆಹಾಲಿಗೆ ಮುಗಿಬಿದ್ದಿರುವುದು ಸೋಜಿಗದ ವಿಷಯ

Comments are closed.