ಕರ್ನಾಟಕ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿರೋಧಿಸುತ್ತಿರುವ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಹೇಳಿದ್ದು ಹೀಗೆ ….

Pinterest LinkedIn Tumblr

yeddy_eshwarappa

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಾರ್ಯ ಚಟುವಟಿಕೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೇ ಉಳಿದ ಯಾರೂ ಕೂಡ ವಿರೋಧ ವ್ಯಕ್ತ ಪಡಿಸಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ಪಕ್ಷದ ಸಹಕಾರದೊಂದಿಗೆ ಬ್ರಿಗೇಡ್ ಸ್ಥಾಪಿಸಿದ್ದೇನೆ. ನಾನು ಈ ಸಂಘಟನೆ ಸ್ಥಾಪಿಸಿರುವುದಕ್ಕೆ ಬಿಜೆಪಿಯಲ್ಲಿ ಯಾರ ವಿರೋಧವೂ ಇಲ್ಲ ಎಂದು ಹೇಳಿದ್ದಾರೆ.

ಬಾಗಲಕೋಟೆಯ ಕೂಡಲ ಸಂಗಮದಲ್ಲಿ ಜನವರಿ 26 ರಂದು ನಡೆಯುವ ಬ್ರಿಗೇಡ್ ಸಮಾವೇಶ ಸಂಬಂಧ ನಡೆದ ಚರ್ಚೆಯಲ್ಲಿ ಅವರು ಪಾಲ್ಗೊಂಡಿದ್ದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಬ್ರಿಗೇಡ್ ಬಗ್ಗೆ ಸಂತಸ ವ್ಯಕ್ತ ಪಡಿಸಿದ್ದಾರೆ.ಹಿಂದುಳಿದ ವರ್ಗಗಳ ಸಮುದಾಯಗಳಿಗಾಗಿ ಸ್ಥಾಪಿಸಿರುವ ರಾಯಣ್ಣ ಬ್ರಿಗೇಡ್ ಬಗ್ಗೆ ಅವರಿಗೆಲ್ಲಾ ಒಳ್ಳೆಯ ಅಭಿಪ್ರಾಯವಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಗೆ ಬಹುಮತ ಹಾಗೂ ಯಡಿಯರೂಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಲಾಯಿತು. ಆದರೆ ಬ್ರಿಗೇಡ್ ನ ಬೆಂಬಲ ಬೇಡ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

Comments are closed.