ಕರ್ನಾಟಕ

ಅಕ್ರಮ ಸಕ್ರಮ ಯೋಜನೆ: ಅರ್ಜಿ ಸಲ್ಲಿಕೆಗೆ 4 ತಿಂಗಳ ಕಾಲಾವಕಾಶ!

Pinterest LinkedIn Tumblr

cm-meet
ಬೆಂಗಳೂರು: ಅಕ್ರಮ -ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಕೆಗೆ 4 ತಿಂಗಳು ಕಾಲಾವಕಾಶ ನೀಡಲು ಸರ್ಕಾರ ನಿರ್ಧರಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಚಿವರು, ಬಿಬಿಎಂಪಿ ಮೇಯರ್, ಮತ್ತು ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
2013ರ ಅಕ್ಟೋಬರ್ 19ಕ್ಕಿಂತ ಮುಂಚಿತವಾಗಿ ಅಕ್ರಮವಾಗಿ ವಾಸದ ಮನೆಗಳು, ವಾಣಿಜ್ಯ ಕಟ್ಟಡ ಕಟ್ಟಿಕೊಂಡವರು ಮತ್ತು ಬಡಾವಣೆ ನಿರ್ಮಿಸಿದವರು ಅರ್ಜಿ ಸಲ್ಲಿಸಿ ಸಕ್ರಮ ಮಾಡಿಕೊಳ್ಳಬಹುದು.ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯಿದೆ ತಿದ್ದುಪಡಿಗೆ ತಂದು 2014ಲ್ಲಿ ಹೊರಡಿಸಿದ್ದ ಅಧಿಸೂಚನೆ ವಿರುದ್ಧ ಕೆಲವರು ಹೈಕೋರ್ಟ್‌ಗೆ ಹೋಗಿದ್ದರು. ಆದರೆ, ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ ಎಂದರು.
ಆಕ್ರಮ ಆಸ್ತಿಯನ್ನು ಸಕ್ರಮಗೊಳಿಸಲು ದಂಡ ಶುಲ್ಕದಲ್ಲಿ ಯಾವುದೇ ಬದಲಾವಣೆ ಇಲ್ಲ. 2013ರ ತಿದ್ದುಪಡಿ ಕಾಯಿದೆಗೆ ನಿಯಮಾವಳಿ ರೂಪಿಸುವಾಗ ಎಷ್ಟು ಶುಲ್ಕ ನಿಗದಿ ಮಾಡಲಾಗಿತ್ತೋ ಅದೇ ಮುಂದುವರಿಯಲಿದೆ ಎಂದು ಹೇಳಲಾಗಿದೆ.
ನಿಯಮ ಉಲ್ಲಂಘಿಸಿದ ಆಸ್ತಿ ಮಾಲೀಕರು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸದಿದ್ದರೆ, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಟ್ಟಡಗಳಾದರೆ ಅವುಗಳನ್ನು ಒಡೆಯುವುದು, ನಿವೇಶನ ಅಥವಾ ಬಡಾವಣೆಗಳನ್ನು ಸರ್ಕಾರದ ವಶಕ್ಕೆ ಪಡೆಯುವ ಮೂಲಕ ಕ್ರಮ ಕೈಗೊಳ್ಳಬೇಕು ಎಂದು ನಿರ್ಧರಿಸಲಾಗಿದೆ. ಅಕ್ರಮ-ಸಕ್ರಮಕ್ಕೆ ಅರ್ಜಿ ಸಲ್ಲಿಸುವವರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗುತ್ತಿದೆ. ಜತೆಗೆ ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದ್ದು, ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಲ್ಲಿಸುವ ವ್ಯವಸ್ಥೆ ತರಲಾಗುತ್ತಿದೆ.

Comments are closed.