ಕರ್ನಾಟಕ

ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಗುಂಡ್ಲುಪೇಟೆಯ ಹಾಲಹಳ್ಳಿಯಲ್ಲಿ ಮಹದೇವ ಪ್ರಸಾದ್ ಅಂತ್ಯಕ್ರಿಯೆ

Pinterest LinkedIn Tumblr

mahadeva

ಬೆಂಗಳೂರು: ಮಂಗಳವಾರ ನಿಧನರಾದ ಸಹಕಾರಿ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಹಾಲಳ್ಳಿಯಲ್ಲಿ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಹದೇವ ಪ್ರಸಾದ್ ಅವರ ಪುತ್ರರಾದ ಗಣೇಶ್ ಪ್ರಸಾದ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಸಾದ್ ಅವರ ಪಾರ್ಥೀವ ಶರೀರ ಈಗಾಗಲೇ ವಿಶೇಷ ಆ್ಯಂಬುಲೆನ್ಸ್ ವಾಹನದಲ್ಲಿ ಚಿಕ್ಕಮಗಳೂರಿನಿಂದ ಮೈಸೂರಿನತ್ತ ಆಗಮಿಸುತ್ತಿದೆ. ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿನಲ್ಲಿ ಮೃತದೇಹ ಮೈಸೂರಿಗೆ ಆಗಮಿಸಲಿದ್ದು, 3 ಗಂಟೆ ಬಳಿಕ ಮಹದೇವ ಪ್ರಸಾದ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ರಾತ್ರಿ ಸುಮಾರು 11.30ರ ಸುಮಾರಿನಲ್ಲಿ ಮೃತದೇಹವನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಾಲಳ್ಳಿಗೆ ಕೊಂಡೊಯ್ಯಲಾಗುತ್ತದೆ.

ಅಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು ಬಳಿಕ ಮಧ್ಯಾಹ್ನದ ವೇಳೆ ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಮಹದೇವ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಹೇಳಿದ್ದಾರೆ.

Comments are closed.