ಕರ್ನಾಟಕ

ಭ್ರೂಣಹತ್ಯೆ ಆರೋಪ: ಸಿಎಂ ಇಬ್ರಾಹಿಂ ವಿರುದ್ಧ ಮಹಿಳಾ ಆಯೋಗದಿಂದ ದೂರು ದಾಖಲು

Pinterest LinkedIn Tumblr

ibrahim
ಬೆಂಗಳೂರು(ಜ. 03): ಭ್ರೂಣಹತ್ಯೆ ಆರೋಪ ಹಿನ್ನೆಲೆಯಲ್ಲಿ ಸಿ.ಎಂ. ಇಬ್ರಾಹಿಂ ವಿರುದ್ಧ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದೆ. ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಅವರು ಯೋಜನಾ ಆಯೋಗದ ಉಪಾಧ್ಯಕ್ಷ ಇಬ್ರಾಹಿಂ ವಿರುದ್ಧ ದೂರು ದಾಖಲು ಮಾಡಿಕೊಂಡಿರುವುದನ್ನು ಖಚಿತಪಡಿಸಿದ್ದಾರೆ.
ವಿಕ್ರಮ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಿ.ಎಂ.ಇಬ್ರಾಹಿಂ ಅವರ ಪುತ್ರಿ ಇಫಾರನ್ನು ತಾನು ನಾಳೆ ಬುಧವಾರ ಭೇಟಿ ಮಾಡುವುದಾಗಿಯೂ, ಅವರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳುವೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ತಿಳಿಸಿದ್ದಾರೆ.
ಅಷ್ಟೇ ಅಲ್ಲ, ಪ್ರಕರಣದಲ್ಲಿ ಆರೋಪಿಗಳು ಎಷ್ಟೇ ಪ್ರಭಾವಿ ಆಗಿದ್ದರೂ ತಪ್ಪಿತಸ್ಥರೆಂಬುದು ಕಂಡುಬಂದರೆ ಕಠಿಣ ಕ್ರಮ ಜರುಗಿಸುವುದು ಖಚಿತ ಎಂದೂ ನಾಗಲಕ್ಷ್ಮೀ ಬಾಯಿ ಸ್ಪಷ್ಟಪಡಿಸಿದ್ದಾರೆ.

Comments are closed.