ಕರ್ನಾಟಕ

ರಾಯಣ್ಣ ಬ್ರಿಗೇಡ್‌ನಿಂದ ಬಿಜೆಪಿಗೆ ಧಕ್ಕೆಯಿಲ್ಲ: ಶೋಭಾ ಕರಂದ್ಲಾಜೆ

Pinterest LinkedIn Tumblr


ಕಲಬುರ್ಗಿ: ರಾಯಣ್ಣ ಬ್ರಿಗೇಡ್‌ನಿಂದ ಬಿಜೆಪಿ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬಿರುವುದಿಲ್ಲ. ಈ ಕುರಿತು ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಕುರಿತು ಚರ್ಚಿಸಲು ಜನವರಿ 21 ಹಾಗೂ 22ರಂದು ಬಿಜೆಪಿ ಕಾರ್ಯಕಾರಣಿ ಸಭೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದರು.

ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ಪಕ್ಷದ ವೇದಿಕೆ ಬಿಟ್ಟು ಪ್ರತೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದರು.

Comments are closed.