
ಬಾಗೇಪಲ್ಲಿ,: ತಾತನೋರ್ವ ತನ್ನ 10 ವರ್ಷದ ಮೊಮ್ಮಗನ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ನಂಜುಡಪ್ಪ ಎಂದು ಗುರುತಿಸಲಾಗಿದೆ. ಮನೆ ಒಳಗೆ ಆಟವಾಡುತ್ತಿದ್ದ ತನ್ನ ಮಗನ ಮಗು ವಿಷ್ಣು ಹೊರಗೆ ಬರುತ್ತಿದ್ದಂತೆ ಏಕಾಏಕಿ ಅಜ್ಜ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾನೆ. ಮಗುವನ್ನು ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಹೋಗಿ ಮನಬಂದಂತೆ ಕೊಚ್ಚಿದ್ದಾನೆ.
ಗಂಭೀರವಾಗಿ ಗಾಯಗೊಂಡಿರುವ ಮಗು ವಿಷ್ಣು ಜೀವನ್ಮರಣದ ಮಧ್ಯ ಹೋರಾಡುತ್ತಿದ್ದು ಆತನನ್ನು ಉಳಿಸಲು ವೈದ್ಯರು ಹರಸಾಹಸ ಪಡುತ್ತಿದ್ದಾರೆ.
Comments are closed.