ಕರ್ನಾಟಕ

ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ ಬಿಜೆಪಿ ಸದಸ್ಯರು!

Pinterest LinkedIn Tumblr

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವಿನ ಜಗಳ ಕಾರಕ್ಕಕ್ಕೇರಿರುವ ಬೆನ್ನಲ್ಲೇ ಶಾಸಕರು ಬಿಎಸ್‌ವೈ ವಿರುದ್ಧ ತಿರುಗಿ ಬಿದಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಪಕ್ಷದ ಆಂತರಿತ ವಿದ್ಯಮಾನಗಳ ಕುರಿತು ಚರ್ಚಿಸಲು ಅವಕಾಶ ನೀಡವಂತೆ ಪತ್ರ ಬರೆದಿದ್ದಾರೆ.

ಸುಮಾರ ನಾಲ್ಕು ಪುಟಗಳ ಪತ್ರದಲ್ಲಿ ಪದಾಧಿಕಾರಿಗಳ ನೇಮಕಾತಿ, ಪಕ್ಷ ಸಂಘಟನೆ, ಬರ ಅಧ್ಯಯನ ತಂಡದಿಂದ ಈಶ್ವರಪ್ಪ ಅವರನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ರಾಜ್ಯಾಧ್ಯಕ್ಷರಾದ ನೀವು ಪಕ್ಷದ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಸುತ್ತಿರೆಂದು ನಿರೀಕ್ಷೆ ಇತ್ತು. ಆದರೆ, ಪದಾಧಿಕಾರಿಗಳ ನೇಮಕ ಮಾಡುವ ವೇಳೆ ನೀವು ಸೌಜನ್ಯಕ್ಕೂ ಚರ್ಚಿಸದೆ ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದೀರಿ ಎಂದು ಈ ನಾಯಕರು ಅಸಮಾಧಾನ ಹೊರಹಾಕಿದ್ದಾರೆ.

Comments are closed.