ಕರ್ನಾಟಕ

ಮುಂದೆ ರಾಜ್ಯದಲ್ಲಿ ಬಿಜೆಪಿ ಮಾತ್ರ ಅಧಿಕಾರ ನಡೆಸಲು ಸಾಧ್ಯ: ಸದಾನಂದಗೌಡ

Pinterest LinkedIn Tumblr


ಶಿವಮೊಗ್ಗ: ಪರಿಷತ್ ವಿಪಕ್ಷ ನಾಯಕ ಸ್ಥಾನ ಬದಲಾವಣೆ ಮಾಡುವ ಸನ್ನಿವೇಶವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಶಿವಮೊಗ್ಗ ಶಿಲ್ಲೆಯ ತೀರ್ಥಹಳ್ಳಿಯ ಬೆಜ್ಜುವಳ್ಳಿ ಗ್ರಾಮದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಪಾಳಯದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಈ ಗೊಂದಲಗಳನ್ನು ನಿವಾರಿಸಲು ರಾಷ್ಟ್ರೀಯ ನಾಯಕರು ಸಮರ್ಥರಿದ್ದಾರೆ ಎಂದರು.

ರಾಜ್ಯ ಬಿಜೆಪಿ ಘಟಕದಲ್ಲಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ನಾಯಕರಿದ್ದಾರೆ. ಅಧಿಕಾರದ ಸ್ಥಾನಗಳು ಕಡಿಮೆ ಇದ್ದು, ಆಕಾಂಕ್ಷಿಗಳ ಪಟ್ಟಿ ಅಧಿಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಮುಂದೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರ ನಡೆಸಬೇಕು. ನಮ್ಮನ್ನು ಬಿಟ್ಟು ಬೇರೆ ಯಾವ ಪಕ್ಷವೂ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Comments are closed.